Breaking News

ಅಮೃತ್ ಪೌಲ್ ಬಂಧನ ಪ್ರಕರಣ: ಪ್ರಭಾವಿ ವ್ಯಕ್ತಿಗಳಿಗೆ ಶುರುವಾಯ್ತು ಸಂಕಷ್ಟ

Spread the love

ಬೆಂಗಳೂರು: ಪಿಎಸ್‌ಐ ಅಕ್ರಮ ಪ್ರಕರಣದಲ್ಲಿ ಅಮೃತ್ ಪೌಲ್ ಅವರ ಬಂಧನದ ಬೆನ್ನಲ್ಲೇ ಕೆಲ ಪ್ರಭಾವಿಗಳಿಗೆ ಸಂಕಷ್ಟ ಎದುರಾಗಿದೆ. ಪೌಲ್ ಅವರ ಬೆಂಗಳೂರಿನ ಸಹಕಾರ ನಗರದಲ್ಲಿರುವ ಮನೆ, ಚಿಕ್ಕಬಳ್ಳಾಪುರ ರಸ್ತೆಯಲ್ಲಿರುವ ಫಾರ್ಮ್ ಹೌಸ್ ಹಾಗೂ ಕಚೇರಿ ಮೇಲೆ ಸಿಐಡಿ ಅಧಿಕಾರಿಗಳು ದಾಳಿ ಮಾಡಿದ ವೇಳೆ ಡೈರಿ ಹಾಗೂ ಇತರೆ ದಾಖಲೆಗಳು ಸಿಕ್ಕಿದ್ದು, ಇವುಗಳೇ ಪ್ರಭಾವಿ ವ್ಯಕ್ತಿಗಳಿಗೆ ಸಂಕಷ್ಟ ತಂದೊಡ್ಡಲಿವೆ ಎಂದು ಹೇಳಲಾಗಿದೆ.

 

 

ಈ ಪ್ರಭಾವಿಗಳು ತಮಗೆ ಬೇಕಾದವರ ನೇಮಕಾತಿಗೆ ಎಡಿಜಿಪಿಯವರಿಗೆ ಮೌಖಿಕ ಸೂಚನೆ ನೀಡಿದ್ದು, ಅಮೃತ್ ಪೌಲ್ ಪ್ರಭಾವಿ ವ್ಯಕ್ತಿಯ ಹೆಸರು ಹಾಗೂ ಅವರು ನೇಮಕಾತಿಗೆ ಸೂಚಿಸಿದ ವ್ಯಕ್ತಿಯ ಹೆಸರನ್ನು ತಮ್ಮ ಡೈರಿಯಲ್ಲಿ ಬರೆದಿಟ್ಟಿದ್ದಾರೆ ಎನ್ನಲಾಗಿದೆ. ಡೈರಿಯಲ್ಲಿರುವ ಕೈಬರಹ ಹಾಗೂ ಅಮ್ರಿತ್ ಪೌಲ್ ಅವರ ಕೈಬರಹವನ್ನು ಪರಿಶೀಲಿಸಲು ಮುಂದಾಗಿರುವ ಅಧಿಕಾರಿಗಳು ಬಳಿಕ ಮುಂದಿನ ಕ್ರಮಕ್ಕೆ ಸಜ್ಜಾಗಲಿದ್ದಾರೆ.


Spread the love

About Laxminews 24x7

Check Also

ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ನಿಷೇಧ:

Spread the loveಬೆಂಗಳೂರು: ಆನ್​ಲೈನ್ ಬೆಟ್ಟಿಂಗ್ ಹಾಗೂ ಗ್ಯಾಂಬ್ಲಿಂಗ್​ಗೆ ಅಂಕುಶ ಹಾಕಲು ರಾಜ್ಯ ಸರ್ಕಾರ ಹೊಸ ಮಸೂದೆಯನ್ನು ರೂಪಿಸಿದೆ.‌ ಕರ್ನಾಟಕ ಪೊಲೀಸ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ