ಬೆಂಗಳೂರು,ಸೆ.14- ಡ್ರಗ್ಸ್ ಜಾಲ ಪ್ರಕರಣದಲ್ಲಿ ಸಿಲುಕಿರುವ ಸ್ಯಾಂಡಲ್‍ವುಡ್ ನಟಿ ರಾಗಿಣಿ ದ್ವಿವೇದಿ ಸೇರಿ 6 ಆರೋಪಿಗಳಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದ್ದು ಪರಪ್ಪನ ಅಗ್ರಹಾರ ಜೈಲಿಗೆ ಹೋಗಬೇಕಾಗಿದೆ.
ಡ್ರಗ್ಸ್ ಜಾಲ ಪ್ರಕರಣದಲ್ಲಿ ಸಿಲುಕಿ ಸಿಸಿಬಿ ವಶದಲ್ಲಿರುವ ರಾಗಿಣಿ ಅವರ 12 ದಿನದ ಹಾಗೂ ಸಂಜನಾ ಅವರ ಒಂದು ವಾರದ ಪೊಲೀಸ್ ಕಸ್ಟಡಿ ಅವಧಿ ಮುಗಿದಿದ್ದು, ಈ ಇಬ್ಬರನ್ನು ಕೆಸಿಜನರಲ್ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆಗೊಳಪಡಿಸಿ ನ್ಯಾಯಾಲಯಕ್ಕೆ ಹಾಜರಿಪಡಿಸಲಾಯಿತು.
ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆ ನಡೆಸಿದ ನ್ಯಾಯಾಧೀಶರು ಈ ಇಬ್ಬರು ನಟಿಯ ಸೇರಿ 6 ಆರೋಪಿಗಳಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ.
ನಂತರ ಅವರನ್ನು ಅಲ್ಲಿಂದ ಮಹಿಳಾ ಸಾಂತ್ವಾನ ಕೇಂದ್ರಕ್ಕೆ ಕರೆತರಲಾಯಿತು. ಇಂದು ಮಧ್ಯಾಹ್ನ ಅವರ ಅರ್ಜಿ ವಿಚಾರಣೆ ನಡೆಯಿತು. ಪೊಲೀಸಲು ಲೂಮ್ ಪೆಪ್ಪರ್, ಪ್ರಶಾಂತ್ ರಂಕಾ, ರಾಹುಲ್, ವಿರೇನ್ ಖನ್ನಾ, ರವಿಶಂಕರ್ ಸೇರಿದಂತೆ 6 ಮಂದಿ ಆರೋಪಿಗಳನ್ನು ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಲಾಯಿತು.
ಈ ಮಧ್ಯೆ ರಾಗಿಣಿ ಅವರು ಎನ್‍ಡಿಪಿಎಸ್ ವಿಶೇಷ ನ್ಯಾಯಾಲಯದಲ್ಲಿ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ಸೆ.16ಕ್ಕೆ ಮುಂದೂಡಿಕೆಯಾಗಿದೆ.
ಈ ಅರ್ಜಿಗೆ ಸಂಬಂಧಿಸಿದಂತೆ ಆಕ್ಷೇಪ ಸಲ್ಲಿಸಲು ಪೊಲೀಸರು ಒಂದು ವಾರ ಕಾಲಾವಕಾಶ ಕೇಳಿರುವ ಹಿನ್ನೆಲೆಯಲ್ಲಿ ನ್ಯಾಯಾಲಯ ವಿಚಾರಣೆಯನ್ನು ಬುಧವಾರಕ್ಕೆ ಮುಂದೂಡಿದೆ.