Breaking News

ವರುಣನ ಆರ್ಭಟ: ಕೃಷ್ಣಾ ನದಿಗೆ ಭಾರಿ ಪ್ರಮಾಣದ ನೀರು

Spread the love

ಚಿಕ್ಕೋಡಿ: ನೆರೆಯ ಮಹಾರಾಷ್ಟ್ರದ ಕೊಂಕಣ ಭಾಗದಲ್ಲಿ ಭಾರಿ ಪ್ರಮಾಣದಲ್ಲಿ ಮಳೆ ಮುಂದುವರೆದಿದ್ದು. ಕ್ಷಣಕ್ಷಣಕ್ಕೂ ಕೃಷ್ಣಾ, ದೂಧಗಂಗಾ ಮತ್ತು ವೇದಗಂಗಾ ನದಿ ನೀರಿನ ಮಟ್ಟದಲ್ಲಿ ಗಣನೀಯ ಏರಿಕೆಯಾಗುತ್ತಿದೆ. ಹೀಗಾಗಿ ಮತ್ತೊಮ್ಮೆ ಪ್ರವಾಹ ಎದುರಾಗುತ್ತದೆ ಎನ್ನುವ ಭೀತಿ ನದಿ ತೀರದ ಜನರಲ್ಲಿ ಆವರಿಸಿದೆ.

 

ಮಹಾರಾಷ್ಟ್ರದ ಘಟ್ಟ ಪ್ರದೇಶದ ಹೆಚ್ಚು ಮಳೆ ಬಿಳುವ ಕೋಯ್ನಾ, ಮಹಾಬಲೇಶ್ವರ, ನವಜಾ. ಪಾಟಗಾಂವ,ಕಾಳಮ್ಮವಾಡಿ ಮತ್ತು ಕೊಲ್ಲಾಪೂರ ಸೇರಿದಂತೆ ಚಿಕ್ಕೋಡಿ ಸುತ್ತಮುತ್ತ ಪ್ರದೇಶದಲ್ಲಿ ಎಡೆಬಿಡದೇ ಮಳೆ ಸುರಿಯುತ್ತಿದ್ದು. ಕೃಷ್ಣಾ ನದಿಗೆ ಅಪಾರ ಪ್ರಮಾಣದ ನೀರು ಹರಿದು ಬರಲಾರಂಭಿಸಿದೆ.

ಐದು ಸೇತುವೆಗಳು ಜಲಾವೃತ

ದೂಧಗಂಗಾ ಮತ್ತು ವೇದಗಂಗಾ ನದಿ ತೀರದ ನಿಪ್ಪಾಣಿ ಹಾಗೂ ಚಿಕ್ಕೋಡಿ ತಾಲೂಕಿನ ಐದು ಸೇತುವೆಗಳು ಜಲಾವೃತಗೊಂಡು ಸಂಚಾರ ಕಡಿತಗೊಂಡಿದ್ದು. ಪ್ರಯಾಣಿಕರು ಸುತ್ತುಬಳಸಿ ಪ್ರಯಾಣ ಮಾಡುವುದು ಅನಿವಾರ್ಯ ಆಗಿದೆ.


Spread the love

About Laxminews 24x7

Check Also

ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಹಾಗೂ ಸುರಪುರ ಶಾಸಕ ರಾಜಾ ವೇಣುಗೋಪಾಲ ನಾಯಕ ಬಿಹಾರಕ್ಕೆ ಪ್ರಯಾಣ.

Spread the love ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಹಾಗೂ ಸುರಪುರ ಶಾಸಕ ರಾಜಾ ವೇಣುಗೋಪಾಲ ನಾಯಕ ಬಿಹಾರಕ್ಕೆ ಪ್ರಯಾಣ. ಬೆಂಗಳೂರು : …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ