Home / Uncategorized / ಸೋನಿಯಾ ಗಾಂಧಿಗೆ ಸಂಕಷ್ಟದ ಸುರಿಮಳೆ; ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮತ್ತೆ ಸಮನ್ಸ್

ಸೋನಿಯಾ ಗಾಂಧಿಗೆ ಸಂಕಷ್ಟದ ಸುರಿಮಳೆ; ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮತ್ತೆ ಸಮನ್ಸ್

Spread the love

ದೆಹಲಿ: ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಜಾರಿ ನಿರ್ದೇಶನಾಲಯ (ED) ಸೋಮವಾರ, ಜುಲೈ 12ರಂದು ಹೊಸದಾಗಿ ಸಮನ್ಸ್ ಜಾರಿ ಮಾಡಿದೆ. ಜುಲೈ 21 ರಂದು ಏಜೆನ್ಸಿಯ (Enforcement Directorate) ಮುಂದೆ ಹಾಜರಾಗುವಂತೆ ಕಾಂಗ್ರೆಸ್ ಪಕ್ಷದ ಉನ್ನತ ನಾಯಕಿಯಾದ ಸೋನಿಯಾ ಗಾಂಧಿಗೆ (Sonia Gandhi) ಸೂಚಿಸಲಾಗಿದೆ.

ಪ್ರಕರಣದಲ್ಲಿ ವಿಚಾರಣೆಯನ್ನು ಮುಂದೂಡುವಂತೆ ಕೋರಿ ಸೋನಿಯಾ ಗಾಂಧಿ ಸಲ್ಲಿಸಿದ್ದ ಮನವಿಯನ್ನು ಫೆಡರಲ್ ಏಜೆನ್ಸಿ ಈ ಹಿಂದೆ ಸ್ವೀಕರಿಸಿತ್ತು. ಜೊತೆಗೆ ಜುಲೈ ಕೊನೆಯ ವಾರದಲ್ಲಿ ಏಜೆನ್ಸಿಯೊಂದಿಗೆ ತನ್ನ ಹೇಳಿಕೆಯನ್ನು ದಾಖಲಿಸುವಂತೆ ಕಾಂಗ್ರೆಸ್ ಅಧ್ಯಕ್ಷರಿಗೆ ತಿಳಿಸಿದೆ.

75 ವರ್ಷದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, “ಕೋವಿಡ್ ಮತ್ತು ಶ್ವಾಸಕೋಶದ ಸೋಂಕಿನ ಕಾರಣದಿಂದಾಗಿ ಆಸ್ಪತ್ರೆಗೆ ದಾಖಲಾದ ನಂತರ ಮನೆಯಲ್ಲಿ ವಿಶ್ರಾಂತಿ ಪಡೆಯುವಂತೆ ವೈದ್ಯರು ಕಟ್ಟುನಿಟ್ಟಾಗಿ ಸಲಹೆ ನೀಡಿದ್ದಾರೆ” ಎಂಬ ಆಧಾರದ ಮೇಲೆ ಹೆಚ್ಚಿನ ಸಮಯವನ್ನು ಕೋರಿ ಏಜೆನ್ಸಿಗೆ ಪತ್ರ ಬರೆದಿದ್ದಾರೆ.

ಇದೇ ಪ್ರಕರಣದಲ್ಲಿ ಸೋನಿಯಾ ಗಾಂಧಿ ಪುತ್ರ ಹಾಗೂ ಸಂಸದ ರಾಹುಲ್ ಗಾಂಧಿ ಅವರು ಇಡಿ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಿದ್ದರು.

ಕೋವಿಡ್ ಸೋಂಕಿಗೆ ಒಳಗಾಗಿದ್ದ ಸೋನಿಯಾ ಗಾಂಧಿ
ಜೂನ್ 2 ರಂದು ಸೋನಿಯಾ ಗಾಂಧಿಯವರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿತ್ತು. ಜೂನ್ 8 ರಂದು ಇಡಿ ಮುಂದೆ ಹಾಜರಾಗಬೇಕಿದ್ದ ಅವರು ವಿಚಾರಣೆಗೆ ಹಾಜರಾಗಲು ಜಾರಿ ನಿರ್ದೇಶನಾಲಯದಿಂದ ಹೆಚ್ಚಿನ ಸಮಯವನ್ನು ಕೋರಿದ್ದರು.

ಶಿಲೀಂದ್ರ ಸೋಂಕಿಗೆ ಚಿಕಿತ್ಸೆ ಪಡೆದಿದ್ದ ಸೋನಿಯಾ ಗಾಂಧಿ
ಬಳಿಕ ಜೂನ್ 12 ರಂದು ಉಸಿರಾಟದ ತೊಂದರೆಯಿಂದ ಅವರನ್ನು ಸರ್ ಗಂಗಾರಾಮ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶಿಲೀಂದ್ರ ಸೋಂಕಿಗೆ ಚಿಕಿತ್ಸೆ ಪಡೆದ ನಂತರ 2 ದಿನದ ಹಿಂದೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರು.

ಇನ್ನೆರಡು ದಿನ ಕಾಲಾವಕಾಶ ಕೇಳಿರುವ ಸೋನಿಯಾ ಗಾಂಧಿ
ವೈದ್ಯರು ವಿಶ್ರಾಂತಿಗೆ ಸೂಚಿಸಿರುವ ಹಿನ್ನೆಲೆಯಲ್ಲಿ ವಿಚಾರಣೆಗೆ ಹಾಜರಾಗಲು ಸೋನಿಯಾ ಇನ್ನಷ್ಟು ಸಮಯ ಕೋರಿದ್ದರು. ಅನಾರೋಗ್ಯ ಸಮಸ್ಯೆ ಇರುವುದರಿಂದ ಇನ್ನೆರಡು ದಿನ ಸಮಯಾವಕಾಶ ಕೋರಿ ಇಡಿಗೆ ಪತ್ರ ಬರೆದಿದ್ದಾರೆ ಎನ್ನಲಾಗಿತ್ತು. ಆದರೆ ಇದೀಗ ಸೋನಿಯಾ ಗಾಂಧಿ ಅವರಿಗೆ ಮತ್ತೆ ಜಾರಿ ನಿರ್ದೇಶನಾಲಯ ಸಮನ್ಸ್ ನೀಡಿದೆ.


Spread the love

About Laxminews 24x7

Check Also

ಬೆಳಗಾವಿ: ಶತಮಾನೋತ್ಸವ ಕಾರ್ಯಕ್ರಮ ಸಂಪನ್ನ

Spread the love ಬೆಳಗಾವಿ: ಇಲ್ಲಿನ ಖಾಸಬಾಗದ ಉಪ್ಪಾರ ಗಲ್ಲಿಯಲ್ಲಿ ನಾಲ್ಕು ದಿನ ವೈಭವದಿಂದ ನಡೆದ ಬನಶಂಕರಿ ದೇವಸ್ಥಾನದ ಶತಮಾನೋತ್ಸವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ