Breaking News
Home / ಜಿಲ್ಲೆ / ಬೆಳಗಾವಿ / ಖಾನಾಪುರ / ನಿರಂತರ ಮಳೆಖಾನಾಪುರ ತಾಲೂಕಿನ ಪ್ರಾಥಮಿಕ ಶಾಲೆಯ ಗೋಡೆಯೂ ತೇವಗೊಂಡು ಕುಸಿತ

ನಿರಂತರ ಮಳೆಖಾನಾಪುರ ತಾಲೂಕಿನ ಪ್ರಾಥಮಿಕ ಶಾಲೆಯ ಗೋಡೆಯೂ ತೇವಗೊಂಡು ಕುಸಿತ

Spread the love

ಬೆಳಗಾವಿ: ಕಳೆದೊಂದು ವಾರದಿಂದ ಕುಂದಾನಗರಿಯಲ್ಲಿ ನಿರಂತರ ಮಳೆ ಸುರಿಯುತ್ತಿದೆ. ಪಶ್ಚಿಮ ಘಟ್ಟ ವ್ಯಾಪ್ತಿಯಲ್ಲಿರುವ ಖಾನಾಪುರ ತಾಲೂಕಿನ ಗುರ್ಲಗಂಜಿ ಗ್ರಾಮದ ಶಾಲಾ ಕೊಠಡಿಯೊಂದು ಕುಸಿದು ಬಿದ್ದಿದೆ. ಇನ್ನೊಂದೆಡೆ, ಮುಡೇವಾಡಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಗೋಡೆಯೂ ತೇವಗೊಂಡು ಕುಸಿತವಾಗಿದೆ. ಶಾಲೆಗೆ ರಜೆ ಇದ್ದ ಕಾರಣ ಯಾವುದೇ ರೀತಿಯ ಪ್ರಾಣಾಪಾಯವಾಗಿಲ್ಲ.

Thumbnail image

ಖಾನಾಪೂರ ತಾಲೂಕಿನಲ್ಲಿ ಎರಡು ದಿನಗಳ ಅಂತರದಲ್ಲಿ ಎರಡು ಶಾಲಾ ಗೋಡೆಗಳು ಮಳೆ ಅಬ್ಬರಕ್ಕೆ ಹಾನಿಯಾಗಿದ್ದು, ಸ್ಥಳಕ್ಕೆ ಶಿಕ್ಷಣ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆ ಎಚ್ಚೆತ್ತುಕೊಂಡು ಅಳಿವಿನಂಚಿಗಿರುವ ಶಾಲೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಮುಂದಾಗುವ ಅನಾಹುತ ತಪ್ಪಿಸುವ ಕೆಲಸ ಮಾಡಬೇಕು ಎಂಬುದು ಸಾರ್ವಜನಿಕರ‌ ಆಗ್ರಹ.

The house wall collapsed due to rain

ಧರೆಗುರುಳಿದ 20ಕ್ಕೂ ಹೆಚ್ಚು ಮನೆಗಳು: ಕಿತ್ತೂರು ತಾಲೂಕಿನಾದ್ಯಂತ ಮಳೆಗೆ 20 ಮನೆಗಳಿಗೆ ಹಾನಿ ಆಗಿದೆ. ಪ್ರಮುಖವಾಗಿ ಕಿತ್ತೂರು ತಾಲೂಕಿನ ಕತ್ರಿದಡ್ಡಿ, ದಿಂಡಲಕೊಪ್ಪ, ಗಲಗಿನಮಡಾ, ನಿಚ್ಚಣಕಿ, ದೇಗಾಂವ ಹಾಗೂ ಚಿಕ್ಕನಂದಿಹಳ್ಳಿ, ತಿಗಡೊಳ್ಳಿ, ಬೈಲೂರು ಗ್ರಾಮಗಳಲ್ಲಿನ ಮನೆಗಳು ಕುಸಿದಿವೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಆದರೆ, ಮನೆಗಳಿಗೆ ಸಂಪೂರ್ಣ ಹಾನಿಯಾಗಿದೆ.


Spread the love

About Laxminews 24x7

Check Also

ಅಥಣಿಯ ಇಬ್ಬರು ವಿದ್ಯಾರ್ಥಿನಿಯರಿಗೆ ತೃತೀಯ ರ್‍ಯಾಂಕ್‌

Spread the love ಬೆಳಗಾವಿ: ಜಿಲ್ಲೆಯ ಅಥಣಿಯ ಬಣಜವಾಡ ವಸತಿ ಪದವಿಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ