ಬೆಂಗಳೂರು: ನರೇಂದ್ರ ಮೋದಿ ಅವರು ಪ್ರಧಾನಿ ಆದ್ಮೇಲೆ ಯುವಕರಿಗೆ ಕೆಲಸ ಇಲ್ಲ. ನಿರುದ್ಯೋಗ ತಾಂಡವಾಡುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಸೋಮವಾರ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅರಮನೆ ಮೈದಾನದಲ್ಲಿ ಯುವ ಜನೋತ್ಸವ ವಿಸ್ತೃತ ಕಾರ್ಯಕಾರಿ ಸಭೆಯಲ್ಲಿ ಭಾಷಣ ಮಾಡಿದ ಸಿದ್ದರಾಮಯ್ಯ, ರಾಜ್ಯ ಯುವ ಕಾಂಗ್ರೆಸ್ ವತಿಯಿಂದ ಯುವ ಗರ್ಜನೆ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ದೇಶದ ಯುವಕರ ಮೇಲೆ ದೊಡ್ಡ ಜವಾಬ್ದಾರಿ ಇದೆ. ಈ ದೇಶದ ಯುವಕರು ರಾಜಕೀಯ, ಆರ್ಥಿಕ, ಸಾಮಾಜಿಕ ಕ್ಷೇತ್ರದಲ್ಲಿ ಬದಲಾವಣೆ ತರುವ ಶಕ್ತಿ ಇವರಲ್ಲಿದೆ ಎಂದರು.
ಶದ ಜನಸಂಖ್ಯೆಯಲ್ಲಿ 30 ವರ್ಷದ ಒಳಗಿನ ಯುವಕ ಯುವತಿಯರು ಶೇ. 60 ರಷ್ಟು ಇದ್ದಾರೆ. ಭಾರತದಲ್ಲಿ 107 ಕೋಟಿ ಜನರಿಗೆ ಕೆಲಸ ಮಾಡುವ ಶಕ್ತಿ ಇದೆ. ಆದ್ರೆ 107 ಕೋಟಿಯಲ್ಲಿ ಶೇ. 40ಕ್ಕಿಂತ ಕಡಿಮೆ ಜನರಿಗೆ ಮಾತ್ರ ಕೆಲಸ ಇದೆ. ಜಗತ್ತಿನಲ್ಲಿ ಯಾವುದೇ ದೇಶದಲ್ಲಿ ಇಷ್ಟೊಂದು ಯುವ ಶಕ್ತಿ ಇಲ್ಲ. ನಮ್ಮ ದೇಶದಲ್ಲಿ ಮಾತ್ರ ಇಷ್ಟೊಂದು ಯುವ ಶಕ್ತಿ ಇದೆ. ಆದ್ರೆ ದುರದೃಷ್ಟ ಯುವ ಶಕ್ತಿ ಬಳಸಿಕೊಳುವುದಕ್ಕೆ ಆಗ್ತಿಲ್ಲ. ಅದ್ರಲ್ಲಿ ಮೋದಿ ಅವ್ರು ಪ್ರಧಾನಿ ಆದ್ಮೇಲೆ ಯುವಕರಿಗೆ ಕೆಲಸ ಇಲ್ಲ. ಯುವ ಶಕ್ತಿ ಇರುವ ನಮ್ಮ ದೇಶದಲ್ಲಿ ನಿರುದ್ಯೋಗ ತಾಂಡವಾಡುತ್ತಿದೆ. ನಗರ ಪ್ರದೇಶದಲ್ಲಿ ಶೇ. 9 ಹಾಗೂ ಗ್ರಾಮೀಣ ಪ್ರದೇಶದಲ್ಲಿ ಶೇ. 6 ರಷ್ಟು ನಿರುದ್ಯೋಗ ಸಮಸ್ಯೆ ಉಂಟಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.