Breaking News

ದೇಶದ ಅತಿ ಕಿರಿಯ ಮೇಯರ್ ವರಿಸಲಿದ್ದಾರೆ ರಾಜ್ಯದ ಅತಿ ಕಿರಿಯ MLA! ಸೆ.4ಕ್ಕೆ ಅಪರೂಪದ ಮದ್ವೆಗೆ ಕೇರಳ ಸಾಕ್ಷಿ

Spread the love

ಕೊಯಿಕ್ಕೋಡ್​: ದೇಶದ ಅತಿ ಕಿರಿಯ ಮೇಯರ್​ ಹಾಗೂ ಕೇರಳದ ಅತಿ ಕಿರಿಯ ಶಾಸಕರ ನಡುವಿನ ಮದುವೆಗೆ ದಿನಾಂಕ ಫಿಕ್ಸ್​ ಆಗಿದೆ. ದೇಶದಲ್ಲೇ ವಿನೂತನ ಮದುವೆ ಸಂಭ್ರಮಕ್ಕೆ ದೇವರ ನಾಡು ಕೇರಳ ಸಾಕ್ಷಿಯಾಗಲಿದೆ.

ತಿರುವನಂತಪುರದ ಮೇಯರ್​ ಆರ್ಯಾ ರಾಜೇಂದ್ರನ್ (21) ಹಾಗೂ ಬಲುಸ್ಸೆರಿ ಕ್ಷೇತ್ರದ ಶಾಸಕ ಕೆ.ಎಂ. ಸಚಿನ್ ದೇವ್​​​ (28) ಅವರ ವಿವಾಹ ಸಮಾರಂಭವು ಸೆಪ್ಟೆಂಬರ್​ 4ರಂದು ಬೆಳಗ್ಗೆ 11 ಗಂಟೆಗೆ ಎಕೆಜಿ ಹಾಲ್​ನಲ್ಲಿ ಅದ್ಧೂರಿಯಾಗಿ ನೆರವೇರಲಿದೆ.

ಕಳೆದ ಮಾರ್ಚ್​ನಲ್ಲಿ ಇಬ್ಬರ ನಿಶ್ಚಿತಾರ್ಥ ನಡೆದಿದೆ.

ಕೇರಳದ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾದ ಭಾರತೀಯ ಮಕ್ಕಳ ಸಂಘಟನೆಯ ವಿಭಾಗ ಬಾಲಸಂಗಮದಿಂದಲೂ ಇಬ್ಬರು ಪರಸ್ಪರ ಪರಿಚಿತರಾಗಿದ್ದಾರೆ. ಸಚಿನ್​ ಕೇರಳ ವಿಧಾನಸಭೆಯ ಅತಿ ಕಿರಿಯ ಶಾಸಕನೆಂಬ ಹೆಗ್ಗಳಿಕೆ ಹೊಂದಿದ್ದಾರೆ. ಇನ್ನೊಂದೆಡೆ ಆರ್ಯಾ ರಾಜೇಂದ್ರನ್ ದೇಶದ ಕಿರಿಯ ಮೇಯರ್​ ಎಂಬ ಗೌರವಕ್ಕೆ ಪಾತ್ರರಾಗಿದ್ದಾರೆ.

ಎಸ್​ಎಫ್​ಐ ಸಂಘಟನೆಯ ಅಖಿಲ ಭಾರತೀಯ ಜಂಟಿ ಕಾರ್ಯದರ್ಶಿಯಾಗಿರುವ ಶಾಸಕ ಸಚಿನ್​ ದೇವ್ ಕೊಯಿಕ್ಕೋಡ್​ನ ನೆಲ್ಲಿಕೋಡ್​ ಮೂಲದವರು. ಎಸ್​ಎಫ್​ಐನ ರಾಜ್ಯ ಕಾರ್ಯದರ್ಶಿ ಆಗಿದ್ದ ಸಮಯದಲ್ಲಿ ಬಲುಸ್ಸೆರಿ ವಿಧಾನಸಭೆ ಚುನಾವಣೆಯಿಂದ ಸ್ಪರ್ಧಿಸಿದ್ದರು. ಸಚಿನ್​ ಅವರು ಕೊಯಿಕ್ಕೂಡ್​ ಸರ್ಕಾರಿ ಕಲಾ ಕಾಲೇಜಿನಲ್ಲಿ ಇಂಗ್ಲಿಷ್​ ಸಾಹಿತ್ಯದಲ್ಲಿ ಪದವಿ ಶಿಕ್ಷಣ ಮತ್ತು ಕೊಯಿಕ್ಕೋಡ್​ ಕಾನೂನು ಕಾಲೇಜಿನಲ್ಲಿ ಕಾನೂನು ಪದವಿಯನ್ನು ಪಡೆದಿದ್ದಾರೆ.

ಆರ್ಯಾ ರಾಜೇಂದ್ರನ್​ ಅವರು 21ನೇ ವಯಸ್ಸಿನಲ್ಲೇ ತಿರುವನಂತಪುರದ ಆಲ್ ಸೇಂಟ್ಸ್ ಕಾಲೇಜಿನ ವಿದ್ಯಾರ್ಥಿಯಾಗಿರುವಾಗಲೇ ತಿರುವನಂತಪುರದ ಮೇಯರ್​ ಆಗಿ ಸೇವೆ ಸಲ್ಲಿಸುತ್ತಿದ್ದಾರೆ. ಇದೀಗ ಇಬ್ಬರ ಮದುವೆ ಫಿಕ್ಸ್​ ಆಗಿದ್ದು, ವಿನೂತನ ಮದುವೆಗೆ ಕೇರಳ ರಾಜ್ಯ ಸಾಕ್ಷಿಯಾಗಲಿದೆ. 


Spread the love

About Laxminews 24x7

Check Also

ಬೆಳಗಾವಿಯ ಡಾಕ್ಟರ್ ಶಿವಸ್ವಾಮಿ ಮುಡಿಗುಂಡ ಅವರಿಗೆ ‘ಕಾಚ್ ಸಮುದಾಯ ಚಾಂಪಿಯನ್ ಪ್ರಶಸ್ತಿ’ ಪ್ರದಾನ!

Spread the love ಬೆಳಗಾವಿಯ ಡಾಕ್ಟರ್ ಶಿವಸ್ವಾಮಿ ಮುಡಿಗುಂಡ ಅವರಿಗೆ ‘ಕಾಚ್ ಸಮುದಾಯ ಚಾಂಪಿಯನ್ ಪ್ರಶಸ್ತಿ’ ಪ್ರದಾನ! ಸಚಿವ ಶರಣ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ