Breaking News

ಬಿಎಸ್‌ವೈಗೆ ಸಿಎಂ ಸ್ಥಾನದ ಆಸೆ ತೋರಿಸಿ ‘ಆಪರೇಷನ್ ಕಮಲ’ ಮಾಡಿಸಿದ್ದು ಯಾರು?: ಸಿದ್ದರಾಮಯ್ಯ

Spread the love

ಬೆಂಗಳೂರು: 4 ದಶಕಗಳ ಕಾಲ ರಕ್ತ-ಬೆವರು ಹರಿಸಿ ಪಕ್ಷ ಕಟ್ಟಿದ್ದ ಬಿ.ಎಸ್.ಯಡಿಯೂರಪ್ಪರನ್ನು ಮೂಲೆಗುಂಪು ಮಾಡಿದವರು ಯಾರು? ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಗೆ ಪ್ರಶ್ನಿಸಿದ್ದಾರೆ. ಖರ್ಗೆ, ಪರಮೇಶ್ವರ್ ಮುಗಿಸಿರುವ ಸಿದ್ದು ಮುಂದಿನ ಗುರಿ ಡಿಕೆಶಿ.

ಸಿದ್ದರಾಮೋತ್ಸವದಿಂದ ಕಾಂಗ್ರೆಸ್ ಸರ್ವನಾಶವಾಗಲಿದೆ ಎಂಬ ಪ್ರಹ್ಲಾದ್ ಜೋಶಿ ಹೇಳಿಕೆಗೆ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

#ಒಡೆದಮನೆಬಿಜೆಪಿ ಹ್ಯಾಶ್ ಟ್ಯಾಗ್ ಬಳಸಿ ಸೋಮವಾರ ಸರಣಿ ಟ್ವೀಟ್ ಮಾಡಿರುವಸಿದ್ದರಾಮಯ್ಯ, ‘ಪಕ್ಷ ಅಧಿಕಾರದಲ್ಲಿದ್ದಾಗಲೇ ಬಿಎಸ್‍ವೈಯನ್ನು ಜೈಲಿಗೆ ಕಳಿಸಿ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿದ್ದು ಯಾರ ಷಡ್ಯಂತ್ರ? ನೀವೂ ಅದರಲ್ಲಿ ಷಾಮೀಲಾಗಿಲ್ಲವೇ? ಯಡಿಯೂರಪ್ಪರಿಗೆ ಸಿಎಂ ಸ್ಥಾನದ ಆಸೆ ತೋರಿಸಿ, ಅವರಿಂದಲೇ ‘ಆಪರೇಷನ್ ಕಮಲ’ ಮಾಡಿಸಿದ್ದು ಯಾರು? ಕೊನೆಗೆ ಅವರನ್ನೇ ಮುಖ್ಯಮಂತ್ರಿ ಸ್ಥಾನದಿಂದ ಕಿತ್ತು ಹಾಕಿದ್ದು ಯಾರು? ಕೈಗೆ ಬಂದದ್ದು ಬಾಯಿಗೆ ಬಾರದೆ ಬಸವರಾಜ್ ಬೊಮ್ಮಾಯಿ ಮುಖ್ಯಮಂತ್ರಿಯಾದಾಗ ಬೆಂಕಿ ಬಿದ್ದದ್ದು ಯಾರ ಹೊಟ್ಟೆಗೆ? ಎಂದು ಜೋಶಿಗೆ ಪ್ರಶ್ನಿಸಿದ್ದಾರೆ.

ಕೇಂದ್ರ ಸಚಿವ @JoshiPralhad ಅವರೇ,, ನಾಲ್ಕು ದಶಕಗಳ ಕಾಲ ರಕ್ತ-ಬೆವರು ಹರಿಸಿ ಪಕ್ಷ ಕಟ್ಟಿದ್ದ @BSYBJP ಅವರನ್ನು ಮೂಲೆಗುಂಪು ಮಾಡಿದವರು ಯಾರು? ಪಕ್ಷ ಅಧಿಕಾರದಲ್ಲಿದ್ದಾಗಲೇ ಅವರನ್ನು ಜೈಲಿಗೆ ಕಳಿಸಿ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿದ್ದು ಯಾರ ಷಡ್ಯಂತ್ರ? ನೀವೂ ಅದರಲ್ಲಿ ಷಾಮೀಲಾಗಿಲ್ಲವೇ?
1/7#ಒಡೆದಮನೆಬಿಜೆಪಿ pic.twitter.com/vYF0ehgf02

— Siddaramaiah (@siddaramaiah)

 

 

ಬಿ.ಎಸ್.ಯಡಿಯೂರಪ್ಪ ಅವರಿಗೆ ಮುಖ್ಯಮಂತ್ರಿ ಸ್ಥಾನದ ಆಸೆ ತೋರಿಸಿ, ಅವರಿಂದಲೆ ಆಪರೇಷನ್ ಕಮಲ ಮಾಡಿಸಿದ್ದು ಯಾರು? ಕೊನೆಗೆ ಅವರನ್ನೇ ಮುಖ್ಯಮಂತ್ರಿ ಸ್ಥಾನದಿಂದ ಕಿತ್ತು ಹಾಕಿದ್ದು ಯಾರು? ಕೈಗೆ ಬಂದದ್ದು ಬಾಯಿಗೆ ಬಾರದೆ @BSBommai ಅವರು ಮುಖ್ಯಮಂತ್ರಿಯಾದಾಗ ಬೆಂಕಿ ಬಿದ್ದದ್ದು ಯಾರ ಹೊಟ್ಟೆಗೆ @JoshiPralhad?
2/7
#ಒಡೆದಮನೆಬಿಜೆಪಿ pic.twitter.com/zchMzf19vO

— Siddaramaiah (@siddaramaiah)

 

‘ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಪ್ರತಿದಿನ ಮಾಜಿ ಸಿಎಂ ಯಡಿಯೂರಪ್ಪ ಮತ್ತು ವಿಜಯೇಂದ್ರರ ವಿರುದ್ಧ ಆರೋಪಗಳ ಸುರಿಮಳೆಗೈಯುತ್ತಿರುವುದು ಯಾರ ಕುಮ್ಮಕ್ಕಿನಿಂದ? ಪಕ್ಷದ ಹಿರಿಯ ನಾಯಕನ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡುತ್ತಿರುವ ಶಾಸಕರ ವಿರುದ್ಧ ಕ್ರಮಕೈಗೊಳ್ಳದಂತೆ ತಡೆಯುತ್ತಿರುವ ಕೈಗಳು ಯಾರದ್ದು ಪ್ರಹ್ಲಾದ್ ಜೋಶಿ?’ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.


Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ