Breaking News

ರಾಣಿ ಚನ್ನಮ್ಮಾ ವಿಶ್ವವಿದ್ಯಾಲಯದ 280 ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್‌ ವಿತರಣೆ: ಸತೀಶ್‌ ಜಾರಕಿಹೊಳಿ

Spread the love

ಬೆಳಗಾವಿ: ಬದುಕಿನ ಸವಾಲುಗಳನ್ನು ಆತ್ಮವಿಶ್ವಾಸದಿಂದ ಎದುರಿಸಿದರೆ ಮಾತ್ರ ವಿದ್ಯಾರ್ಥಿ ಜೀವನದಲ್ಲಿ ಯಶಸ್ಸು ಸಾಧಿಸಲು ಸಾಧ್ಯವಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾರಕಿಹೊಳಿ ಅವರು ಹೇಳಿದರು.

ರಾಣಿ ಚನ್ನಮ್ಮಾ ವಿಶ್ವವಿದ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಡಾ. ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರ 131ನೇ ಜಯಂತಿ ಪ್ರಯುಕ್ತ ನಡೆದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್‌ ವಿತರಣಾ ಸಮಾರಂಭದಲ್ಲಿ ಅವರು ಮಾತನಾಡಿದರು.

ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌ ನೀಡುತ್ತಿರುವುದು ಒಳ್ಳೆಯ ಬೆಳವಣಿಗೆ. ತಂತ್ರಜ್ಞಾನದ ಯುಗದಲ್ಲಿ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌ ಅಗತ್ಯತೆ ಇದೆ. ಹೀಗಾಗಿ ವಿದ್ಯಾರ್ಥಿಗಳು ಲ್ಯಾಪ್‌ಟಾಪ್‌ ಅನ್ನು ಉನ್ನತ ಅಧ್ಯಯನಕ್ಕೆ ಬಳಕೆ ಮಾಡಬೇಕೆಂದರು. ಯಾವುದೇ ಸರ್ಕಾರಗಳು ಸೌಲಭ್ಯಗಳನ್ನು ಹಲವು ಭಾರೀ ನೀಡುವುದಿಲ್ಲ. ಆದ ಕಾರಣ ಸರ್ಕಾರ ನೀಡಿದ ಸೌಲಭ್ಯಗಳನ್ನು ಪಡೆದು ವಿದ್ಯಾರ್ಥಿಗಳು ಸರಿಯಾಗಿ ಸದ್ಬಳಕೆ ಮಾಡಿಕೊಳ್ಳಬೇಕೆಂದು ತಿಳಿಸಿದರು.


Spread the love

About Laxminews 24x7

Check Also

ಮಾಳಮಾರುತಿ ಪೊಲೀಸ್ ಠಾಣೆಯ ಸಿಪಿಐ ಜೆ.ಎಂ.ಕಾಲೆಮಿರ್ಚಿ ಪುಂಡ ಎಂಇಎಸ್ ಮುಖಂಡನ ಜೊತೆಗೆ ಸೆಲ್ಪಿ

Spread the loveಕರ್ನಾಟಕ‌ ರಾಜ್ಯೋತ್ಸವದಲ್ಲಿ ಕರಾಳ ದಿನಾಚರಣೆ ಮಾಡಲು ಎಂಇಎಸ್ ಗೆ ಅನುಮತಿ ಕೊಡುವುದಿಲ್ಲ ಎಂದು ರಾತ್ರೋರಾತ್ರಿ ಈ‌ ಮೊದಲು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ