ಕಳೆದ ರಾತ್ರಿ ಸುರಿದ ಭಾರಿ ಮಳೆ ಗಾಳಿಗೆ ಮನೆಯ ಮೇಲ್ಛಾವಣಿ ಕುಸಿತವಾಗಿರುವ ಘಟನೆ ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ಪಟ್ಟಣದ ಚಿಕ್ಕರೂಗಿ ಗ್ರಾಮದಲ್ಲಿ ನಡೆದಿದೆ.
ಬಸವರಾಜ್ ಸಿಂದಗಿ ಎಂಬುವವರ ಮನೆ ಕುಸಿತವಾಗಿದ್ದು ಮನೆ ಮೇಲ್ಛಾವಣಿಯ ಕುಸಿಯುವ ವೇಳೆಯಲ್ಲಿ ಕುಟುಂಬದ ಸದಸ್ಯರು ಮನೆಯಿಂದ ಆಚೆಗೆ ಬಂದ ಕಾರಣ ಯಾವುದೇ ಪ್ರಾಣ ಹಾನಿಯಾಗಿಲ್ಲ, ಮೇಲ್ಛಾವಣಿ ಕುಸಿತದಿಂದ 3 ಲಕ್ಷಕ್ಕೂ ಅಧಿಕ ಹಾನಿಯಾಗಿದೆ. ಮನೆಯಲ್ಲಿದ್ದ ವಸ್ತುಗಳು ಜಖಂಗೊಂಡಿವೆ.ದೇವರಹಿಪ್ಪರಗಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Laxmi News 24×7