Breaking News

ರಮೇಶ ಜಾರಕಿಹೊಳಿ ಅಧ್ಯಕ್ಷತೆಯಲ್ಲಿ ಕೊಣ್ಣೂರ ಪುರಸಭೆ ಕಾರ್ಯಾಲಯದಲ್ಲಿ ಪ್ರಗತಿ ಪರಿಶೀಲನಾ ಸಭೆ

Spread the love

ಗೋಕಾಕ ಮತಕ್ಷೇತ್ರದ ಕೊಣ್ಣೂರ ಪುರಸಭೆ ಕಾರ್ಯಾಲಯದಲ್ಲಿ ಮಾಜಿ ಸಚಿವ ರಮೇಶ ಜಾರಕಿಹೊಳಿ ಅಧ್ಯಕ್ಷತೆಯಲ್ಲಿ ಇಂದು ಕೊಣ್ಣೂರ ಪುರಸಭೆ ವ್ಯಾಪ್ತಿಯಲ್ಲಿ ಸಂಭಾವ್ಯ ಪ್ರವಾಹ ಕುರಿತು ಸಿದ್ಧತೆ ಹಾಗೂ ಪ್ರಗತಿ ಪರಿಶೀಲನಾ ಸಭೆ ಜರುಗಿತು. 

ಗೋಕಾಕ ಮತಕ್ಷೇತ್ರದ ಕೊಣ್ಣೂರ ಪುರಸಭೆ ಕಾರ್ಯಾಲಯದಲ್ಲಿ ಶಾಸಕ ರಮೇಶ ಜಾರಕಿಹೊಳಿ ಅಧ್ಯಕ್ಷತೆಯಲ್ಲಿ ಕೊಣ್ಣೂರು ಪುರಸಭೆಯ ಅಧಿಕಾರಿಗಳೊಂದಿಗೆ ಪ್ರವಾಹ ತಡೆ ಪರಿಶೀಲನಾ ಸಭೆ ನಡೆಯಿತು. ಈ ವೇಳೆ ಪ್ರವಾಹ ನಿಯಂತ್ರಣ ಹಾಗೂ ಅಧಿಕಾರಿಗಳು ಈ ವೇಳೆ ತರೆಗೆದುಕೊಳ್ಳಬೇಕಾದ ಕ್ರಮಗಳನ್ನು ಕುರಿತಂತೆ ಅಧಿಕಾರಿಗಳೊಂದಿಗೆ ಚರ್ಚೆಯನ್ನು ನಡೆಸಿದರು.

ಇನ್ನು ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಮಾಜಿ ಸಚಿವ ರಮೇಶ್ ಜಾರಕಿಹೊಳಿರವರು, ಕೊಣ್ಣೂರು ಭಾಗದಲ್ಲಿ ಪ್ರವಾಹ ಪರೀಸ್ಥಿತಿ ಕುರಿತಂತೆ ಚರ್ಚೆ ನಡೆಸುವ ಉದ್ದೇಶದಿಂದ ಇಲ್ಲಿ ಸಭೆಯನ್ನು ನಡೆಸಿದ್ದೇವೆ, ವಿವಿಧ ವಾರ್ಡ್‍ಗಳಲ್ಲಿರುವ ಸಮಸ್ಯೆಗಳನ್ನು ಕುರಿತಂತೆ ಚರ್ಚೆಯನ್ನು ನಡೆಸಿದ್ದೇವೆ.

ಈಗ ಸಧ್ಯ ಪ್ರವಾಹದ ಪರೀಸ್ಥಿತಿಯಿಲ್ಲ. ಮುಂಬರುವ ದಿನಗಳಲ್ಲಿ ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.

ಈ ಸಂದರ್ಭದಲ್ಲಿ ಪುರಸಭೆ ವತಿಯಿಂದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ರವರನ್ನು ಸನ್ಮಾನಿಸಿ ಗೌರವಿಸಲಾಯಿತು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ