ಗ್ರಾಮೀಣ ಪ್ರದೇಶದ ಘನ ಮತ್ತು ದ್ರವ್ಯ ತ್ಯಾಜ್ಯ ಘಟಕದ ನಿರ್ವಹಣೆಯ ವಾಹನಗಳಿಗೆ ಮಹಿಳಾ ಚಾಲಕರಿಗೆ ತರಬೇತಿ ಕಾರ್ಯಕ್ರಮಕ್ಕೆ ಜಿಲ್ಲಾ ಪಂಚಾಯತಿ ಸಿಇಓ ದರ್ಶನ್ ಎಚ್.ವ್ಹಿ ಅವರು ಚಾಲನೆ ನೀಡಿದರು.
ಜಿಲ್ಲಾ ಪಂಚಾಯತಿ, ಸಂಜೀವಿನಿ ಡೇ-ಎನ್‍ಆರ್‍ಎಲ್‍ಎಂ, ಸ್ವಚ್ಛ ಭಾರತ ಮಿಶನ್ ಯೋಜನೆ ಹಾಗೂ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆಯ ಸಂಯುಕ್ತ ಆಶ್ರಯದಲ್ಲಿ ಗ್ರಾಮ ಪಂಚಾಯತಿಗಳ ಘನ ಮತ್ತು ದ್ರವ್ಯ ತ್ಯಾಜ್ಯ ನಿರ್ವಹಣೆಗಾಗಿ ಸ್ವ ಸಹಾಯ ಗುಂಪಿನ ಮಹಿಳಾ ಸದಸ್ಯರಿಗೆ ವಾಹನ ಚಾಲನಾ ತರಬೇತಿ ಕಾರ್ಯಕ್ರಮಕ್ಕೆ ಜಿಲ್ಲಾ ಪಂಚಾಯತಿ ಸಿಇಓ ದರ್ಶನ್ ಎಚ್.ವ್ಹಿ ಅವರು ಚಾಲನೆ ನೀಡಿದರು.
ಬೆಳಗಾವಿ ಜಿಲ್ಲೆಯ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಗ್ರಾಮೀಣ ಪ್ರದೇಶದ ಸ್ವ ಸಹಾಯ ಗುಂಪಿನ ಸದಸ್ಯರಿಗೆ ಈ ತರಬೇತಿ ನೀಡಲಾಗುತ್ತಿದೆ. ಮೊದಲನೇ ಹಂತದಲ್ಲಿ ಜಿಲ್ಲೆಯ ಸ್ವ ಸಹಾಯ ಗುಂಪಿನ 35 ಮಹಿಳಾ ಸದಸ್ಯರಿಗೆ ವಾಹನ ಚಾಲನಾ ತರಬೇತಿ ನೀಡಲಾಗುತ್ತಿದೆ. ಪ್ರತಿ ಗ್ರಾಮ ಪಂಚಾಯತಿಗೆ ಒಂದರಂತೆ ಸುಮಾರು 500 ಮಹಿಳೆಯರಿಗೆ ತರಬೇತಿ ನೀಡಲು ಉದ್ದೇಶಿಸಲಾಗಿದೆ.