Breaking News
Home / ಜಿಲ್ಲೆ / ಬೆಳಗಾವಿ / ಚಿಕ್ಕೋಡಿ / ಹಿಡಕಲ್‌ ಡ್ಯಾಂಗೆ ಒಂದೇ ದಿನ 8 ಅಡಿ ನೀರು

ಹಿಡಕಲ್‌ ಡ್ಯಾಂಗೆ ಒಂದೇ ದಿನ 8 ಅಡಿ ನೀರು

Spread the love

ಬೆಳಗಾವಿ/ಚಿಕ್ಕೋಡಿ: ಜಿಲ್ಲೆಯಲ್ಲಿ ಮಳೆಯ ಆರ್ಭಟ ಕಡಿಮೆಯಾಗಿದೆ. ಅದರೆ ಕಳೆದ ಕೆಲ ದಿನಗಳಿಂದ ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ನದಿಗಳಿಗೆ ಅಧಿಕ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಆದರೆ ಜಿಲ್ಲೆಯಲ್ಲಿ ಇನ್ನೂ ಆತಂಕ ಪಡುವಷ್ಟು ಪ್ರವಾಹದ ಸ್ಥಿತಿ ಎದುರಾಗಿಲ್ಲ.

 

ಮಹಾರಾಷ್ಟ್ರದ ಅಂಬೋಲಿ ಮತ್ತು ಚಂದಗಡ ಘಟ್ಟ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು ಇದರಿಂದ ಹಿಡಕಲ್‌ ಜಲಾಶಯದ ನೀರಿನ ಮಟ್ಟ ಒಂದೇ ದಿನದಲ್ಲಿ ಎಂಟು ಅಡಿಗಳಷ್ಟು ಏರಿಕೆಯಾಗಿದೆ. ಘಟಪ್ರಭಾ ನದಿಗೆ ಈಗ 27 ಸಾವಿರ ಕ್ಯೂಸೆಕ್‌ ನೀರು ಬರುತ್ತಿದ್ದು ಹಿಡಕಲ್‌ ಜಲಾಶಯ ಮೈದುಂಬಿಕೊಂಡಿದೆ. ಒಟ್ಟು 2175 ಅಡಿ ಸಾಮರ್ಥ್ಯದ ಜಲಾಶಯದಲ್ಲಿ ಈಗ 2116 ಅಡಿಗಳಷ್ಟು ನೀರು ಸಂಗ್ರಹವಾಗಿದೆ.

ಮಹಾರಾಷ್ಟ್ರದ ಕೊಯ್ನಾ, ಮಹಾಬಲೇಶ್ವರ, ನವಜಾ, ಪಾಟಗಾಂವ, ಕಾಳಮ್ಮವಾಡಿ ಮತ್ತು ಕೊಲ್ಲಾಪೂರ ಸೇರಿದಂತೆ ಚಿಕ್ಕೋಡಿ ಸುತ್ತಮುತ್ತಲ ಪ್ರದೇಶದಲ್ಲಿ ಎಡೆಬಿಡದೇ ಮಳೆ ಸುರಿಯುತ್ತಿದ್ದು, ಕೃಷ್ಣಾ ನದಿಗೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದೆ. ಸೋಮವಾರ ಕೃಷ್ಣಾ, ದೂಧಗಂಗಾ ಮತ್ತು ವೇದಗಂಗಾ ನದಿ ನೀರಿನ ಮಟ್ಟದಲ್ಲಿ ಮೂರು ಅಡಿಯಷ್ಟು ಹೆಚ್ಚಾಗಿದೆ.


Spread the love

About Laxminews 24x7

Check Also

ಕರ್ನಾಟಕ ‘SSLC ಪರೀಕ್ಷೆ-2’ರ ‘ಪರಿಷ್ಕೃತ ವೇಳಾಪಟ್ಟಿ’ ಪ್ರಕಟ

Spread the love ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಎಸ್ ಎಸ್ ಎಲ್ ಸಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ