Breaking News

ಸಾಲದ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: 2 ಲಕ್ಷ ರೂ.ವರೆಗೆ ಸಾಲ ಸೌಲಭ್ಯಕ್ಕೆ ಅರ್ಜಿ

Spread the love

ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃಧ್ಧಿ ನಿಗಮದಿಂದ 2022-23ನೇ ಸಾಲಿಗೆ ಡಿ.ದೇವರಾಜ ಅರಸು ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ.

ಹಿಂದುಳಿದ ವರ್ಗಗಳ ಅರ್ಜಿದಾರರುಗಳು ಆರ್ಥಿಕ ಚಟುವಟಿಕೆ ಕೈಗೊಳ್ಳಲು ಗರಿಷ್ಠ 2 ಲಕ್ಷ ರೂ.

ವರೆಗೆ ಆರ್ಥಿಕ ನೆರವು ನೀಡಲಾಗುತ್ತಿದ್ದು, ಇದರಲ್ಲಿ ಗರಿಷ್ಠ ಶೇ 15 ರಷ್ಟು ಸಹಾಯಧನ, ಉಳಿಕೆ ಮೊತ್ತ ವಾರ್ಷಿಕ ಶೇ. 4ರ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ಒದಗಿಸಲಾಗುತ್ತಿರುತ್ತದೆ.

ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿಗೆ (ವಿಶ್ವಕರ್ಮ, ಉಪ್ಪಾರ, ಅಂಬಿಗ, ಸವಿತಾ, ಮಡಿವಾಳ, ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯ, ಒಕ್ಕಲಿಗ, ಲಿಂಗಾಯತ, ಕಾಡುಗೊಲ್ಲ, ಹಟ್ಟಿಗೊಲ್ಲ, ಮರಾಠ ಮತ್ತು ಇದರ ಉಪ ಸಮುದಾಯ ಹೊರತುಪಡಿಸಿ) ಸೇರಿದವರು ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ.

ಆಸಕ್ತರು https://suvidha.karnataka.gov.in ಜಾಲತಾಣದಲ್ಲಿ ಅಗಸ್ಟ್ 24 ರೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ನಿಗಮದ ವೆಬ್‍ಸೈಟ್ https://dbcdc.karnataka.gov.in ಇಲ್ಲಿ ಸಂಪರ್ಕಿಸಿ ಹೆಚ್ಚಿನ ಮಾಹಿತಿ ಪಡೆಯಬಹುದು.


Spread the love

About Laxminews 24x7

Check Also

ವರದಕ್ಷಿಣೆ ಕಿರುಕುಳ ಆರೋಪ, ಐಎಸ್‌ಡಿ ಡಿವೈಎಸ್‌ಪಿ ವಿರುದ್ಧ ಎಫ್ಐಆರ್

Spread the love ಬೆಂಗಳೂರು : ಡಿವೈಎಸ್‌ಪಿಯೊಬ್ಬರ ವಿರುದ್ಧ ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. 41 ವರ್ಷದ ಮಹಿಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ