ಬೆಳಗಾವಿ ಜಿಲ್ಲೆಯಲ್ಲಿ ಮಳೆಯ ಅಬ್ಬರ ಜೋರಾಗಿದೆ. ಧಾರಾಕಾರ ಮಳೆಗೆ ಬೈಲಹೊಂಗಲ ತಾಲೂಕಿನ ಯರಗೊಪ್ಪ ಗ್ರಾಮದಲ್ಲಿ ಮನೆಗೋಡೆ ಕುಸಿದಿದೆ.
ಹೌದು ಯರಗೊಪ್ಪ ಗ್ರಾಮದ ಜನತಾ ಪ್ಲಾಟ್‍ನಲ್ಲಿರುವ ಈರಪ್ಪ ಚಂದುಗೋಳ ಎಂಬುವರ ಮನೆಗೋಡೆ ಮಳೆಯಿಂದ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಮನೆಯಲ್ಲಿ ಇದ್ದವರೆಲ್ಲಾ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಮನೆ ಬಿದ್ದರೂ ಸ್ಥಳಕ್ಕೆ ಪಿಡಿಒ ಸೇರಿ ಇತರೆ ಯಾವುದೇ ಅಧಿಕಾರಿಗಳು ಭೇಟಿ ನೀಡದೇ ಇರೋದು ಸಧ್ಯ ತೀವ್ರ ಟೀಕೆಗೆ ಗುರಿಯಾಗಿದೆ. ಗೋಡೆ ಬಿದ್ದ ಮನೆಯಲ್ಲೇ ಕುಟುಂಬಸ್ಥರು ವಾಸಿಸುತ್ತಿದ್ದಾರೆ. ಸೂಕ್ತ ವ್ಯವಸ್ಥೆ ಕಲ್ಪಿಸುವಂತೆ ಕುಟುಂಬಸ್ಥರು ಆಗ್ರಹಿಸಿದ್ದಾರೆ. ಜಿಲ್ಲಾಡಳಿತ ಹಾಗೂ ಜನಪ್ರತಿನಿಧಿಗಳು ಇತ್ತ ಗಮನಹರಿಸಬೇಕಿದೆ.