Breaking News

ಬೆಳಗಾವಿಯಲ್ಲಿ ನಿರಂತರ ಮಳೆ ಮನೆಗಳು ಜಲಾವೃತ

Spread the love

ಬೆಳಗಾವಿ: ಪಶ್ಚಿಮಘಟ್ಟ ಸೇರಿ ಕುಂದಾನಗರಿ ಬೆಳಗಾವಿಯಲ್ಲಿ ನಿರಂತರ ಮಳೆಯಿಂದ ಜನವಸತಿ ಪ್ರದೇಶಗಳಿಗೆ ನೀರು ನುಗ್ಗಿದೆ. ಮನೆಗಳು ಜಲಾವೃತಗೊಂಡ ನಿವಾಸಿಗಳು ಪರದಾಡುವಂತೆ ಆಗಿದೆ. ಅಲ್ಲದೇ, ನೀರು ಹೊರಗೆ ಹಾಕಲು ಹರಸಾಹಸ ಪಡುತ್ತಿದ್ದಾರೆ.

ಕಳೆದ ಮೂರು ದಿನಗಳಿಂದ ಸತತವಾಗಿ ಸುರಿಯುತ್ತಿರುವ ಮಳೆಯಿಂದ ಕೇಶವ ನಗರ, ಅನ್ನಪೂರ್ಣೇಶ್ವರಿ ನಗರದ ಮನೆಗಳಿಗೆ ನೀರು ನುಗ್ಗಿದೆ. ಕೇಶವ ನಗರದಲ್ಲಿ 10ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ. ಬಡಾವಣೆಗಳಲ್ಲಿ ಸರಿಯಾದ ಒಳ ಚರಂಡಿ ವ್ಯವಸ್ಥೆ ಮಾಡದ ಕಾರಣ ಈ ಪರಿಸ್ಥಿತಿ ಉಂಟಾಗಿದೆ ಸ್ಥಳೀಯ ನಿವಾಸಿಗಳು ಆಕ್ರೋಶ ಹೊರಹಾಕಿದ್ದಾರೆ.

ಇದೇ ವೇಳೆ, ವಾರ್ಡ್​​ ನಂಬರ್ 50ರ ನಗರ ಸೇವಕಿ ಸಾರಿಕಾ ಪಾಟೀಲ್ ಮಾತನಾಡಿ, ಎಲ್ಲ ಕಡೆಗಳಲ್ಲಿ ಪೇವರ್​​ಗಳನ್ನು ಅಳವಡಿಸಿದ್ದೇವೆ. ಹೀಗಾಗಿ ಈ ಬಾರಿ ಅಷ್ಟೊಂದು ಸಮಸ್ಯೆ ಆಗಿಲ್ಲ. ಈ ಹಿಂದೆ ಸಂಭವಿಸಿದ ಪ್ರವಾಹದಲ್ಲಿ ಎಲ್ಲ ಮನೆಗಳಿಗೆ ನೀರು ನುಗ್ಗಿ ಜನರಿಗೆ ಬಹಳಷ್ಟು ಸಮಸ್ಯೆ ಆಗಿತ್ತು. ನಾನು ಬೆಳಗ್ಗೆ 8 ಗಂಟೆಯಿಂದ ಸ್ಥಳದಲ್ಲಿಯೇ ಇದ್ದು, ಸಮಸ್ಯೆ ಪರಿಹಾರಕ್ಕೆ ಯತ್ನಿಸಲಾಗುತ್ತಿದೆ ಎಂದು ಹೇಳಿದ್ದಾರೆ.


Spread the love

About Laxminews 24x7

Check Also

ಕ್ರಾಂತಿ ಮಹಿಳಾ ಮಂಡಳ, ಉಮಾ ಸಂಗೀತ ಪ್ರತಿಷ್ಠಾನದಿಂದ ಸ್ವಾತಂತ್ರ್ಯ ದಿನಾಚರಣೆ ಮಕ್ಕಳಿಗೆ ದೇಶಾಭಿಮಾನ ಬೆಳೆಸಿ: ಸಂತೋಷ್ ಮಠಪತಿ

Spread the love ಬೆಳಗಾವಿ: ಪ್ರಾಥಮಿಕ ಹಂತದಲ್ಲೆ ಮಕ್ಕಳಿಗೆ ದೇಶಾಭಿಮಾನ ಬೆಳೆಸಿ, ದೇಶದ ಉತ್ತಮ ನಾಗರಿಕನನ್ನಾಗಿ ಮಾಡುವ ಜವಾಬ್ದಾರಿ ಪೋಷಕರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ