ಗಣಿ & ಭೂವಿಜ್ಞಾನ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ, ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆ…
ಭಾ.ಜ.ಪ ಮುಖಂಡರು, ವಿಜಯಪುರ ನಗರ ಶಾಸಕರಾದ ಸನ್ಮಾನ್ಯ ಶ್ರೀ ಬಸನಗೌಡ ಪಾಟೀಲ ಯತ್ನಾಳರವರು, ಇಂದು ಮಾನ್ಯ ಗಣಿ & ಭೂವಿಜ್ಞಾನ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ, ಹಿರಿಯ ನಾಗರಿಕರ ಸಬಲೀಕರಣ ಸಚಿವರಾದ ಸನ್ಮಾನ್ಯ ಶ್ರೀ ಹಾಲಪ್ಪ ಆಚಾರ್ ರವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಇಲಾಖಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪಾಲ್ಗೊಂಡರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಾದ ಡಾ. ವಿಜಯಮಾಹಾಂತೇಶ ದಾನಮ್ಮನವರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀ ರಾಹುಲ್ ಶಿಂಧೆ ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳು, ಸಿಬ್ಬಂದಿಗಳು ಪಾಲ್ಗೊಂಡಿದ್ದರು.