Breaking News

ವಿದ್ಯುತ್ ಟಿಸಿ ದುರಸ್ಥಿ ವೇಳೆ ವಿದ್ಯುತ್ ಪ್ರವಹಿಸಿ ಲೈನ್ ಮ್ಯಾನ್ ಸಾವು

Spread the love

ಮೂಡಲಗಿ: ತಾಲೂಕಿನ ತಿಗಡಿ ಗ್ರಾಮದಲ್ಲಿನ ವಿದ್ಯುತ್ ಟ್ರಾನ್ಸ್ ಫಾರ್ಮರ್‌ನಲ್ಲಿ ದುರಸ್ಥಿ ಮಾಡುವ ಸಂದರ್ಭದಲ್ಲಿ ಆಕಸ್ಮಿಕ ವಿದ್ಯುತ್ ಪ್ರವಹಿಸಿ ಲೈನ್ ಮ್ಯಾನ್ ಸಾವನ್ನಪ್ಪಿರುವ ಘಟನೆ ಗುರುವಾರ ಸಂಜೆ ನಡೆದಿದೆ.

ತಿಗಡಿ ಗ್ರಾಮದ ಹತ್ತಿರ ಗ್ರಾಮದಲ್ಲಿ ವಿದ್ಯುತ್ ಟ್ರಾನ್ಸ್ ಫಾರ್ಮರ್‌ (ಟಿ.ಸಿ) ದುರಸ್ಥಿ ವೇಳೆಯಲ್ಲಿ ತಿಗಡಿ ಹೆಸ್ಕಾಂ ಶಾಖೆಯ ಸಿಬ್ಬಂದಿ ನಿಂಗಪ್ಪ ಕರಿಗೌಡರ್ (38) ಟ್ರಾನ್ಸ್ ಫಾರ್ಮರ್‌ ಮೇಲೆಯೇ ಸಾವನ್ನಪಿದು.

 

ಎಲ್ಲವನ್ನೂ ಸರಿಯಾಗಿ ಚಕ್ ಮಾಡಿಕೊಂಡೆ ಕೆಲಸ ಶುರು ಮಾಡಿದ್ದ ಲೈನ್ ಮ್ಯಾನ್, ಆದರೆ ಏಕಾಏಕಿ ವಿದ್ಯುತ್ ಪ್ರವಹಿಸಿ ಲೈನ್ ಮ್ಯಾನ್ ಸಾವನ್ನಪಿದು ಎಂದು ತಿಳಿದು ಬಂದಿದೆ.

ಘಟನಾ ಸ್ಥಳದಲ್ಲಿ ಮೃತ ನಿಂಗಪ್ಪನ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ, ಘಟನಾ ಸ್ಥಳಕ್ಕೆ ಹೆಸ್ಕಾಂ ಅಧಿಕಾರಿಗಳು ಮತ್ತು ಕುಲಗೋಡ ಪೊಲೀಸ್ ಠಾಣಾ ಅಧಿಕಾಗಳು ಭೆಟಿ ನೀಡಿದ್ದಾರೆ.


Spread the love

About Laxminews 24x7

Check Also

ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ

Spread the loveಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ