ಬೆಳಗಾವಿ: ಖಾನಾಪುರ ತಾಲೂಕಿನ ಬೀಡಿ ಹೋಬಳಿಯ ಚುಂಚವಾಡ ಗ್ರಾಮದಲ್ಲಿ ಮಳೆಯಿಂದ ಗೋಡೆ ಕುಸಿದು ಮೃತಪಟ್ಟ ಬಾಲಕನ ಕುಟುಂಬಕ್ಕೆ ಬೆಳಗಾವಿ ಜಿಲ್ಲಾಧಿಕಾರಿ ನಿತೇಶ ಪಾಟೀಲ 5 ಲಕ್ಷ ರೂಪಾಯಿ ಪರಿಹಾರ ತಲುಪಿಸಿದ್ದಾರೆ.
ಅನಂತರಾಜ ಧರಣೇಂದ್ರ ಪಾಶೆಟ್ಟಿ(16) ಮನೆಯ ಗೋಡೆ ಕುಸಿದ ಪರಿಣಾಮ ಸಾವನ್ನಪ್ಪಿದ್ದ. ಕುಟುಂಬಕ್ಕೆ ಐದು ಲಕ್ಷ ರೂಪಾಯಿ ಪರಿಹಾರವನ್ನು ಕೆಲವೇ ಗಂಟೆಗಳಲ್ಲಿ ಬೆಳಗಾವಿ ಜಿಲ್ಲಾಧಿಕಾರಿ ಆರ್.ಟಿ.ಜಿ.ಎಸ್ ಮೂಲಕ ಜಮಾ ಮಾಡಿದ್ದಾರೆ. ಪ್ರಕೃತಿ ವಿಕೋಪದಿಂದ ಈ ಘಟನೆ ಸಂಭವಿಸಿರುವ ಹಿನ್ನೆಲೆಯಲ್ಲಿ ನಿಯಮಾವಳಿ ಪ್ರಕಾರ ಮೃತ ಬಾಲಕನ ತಂದೆ ಧರಣೇಂದ್ರ ಪಾಶೆಟ್ಟಿ ಅವರ ಬ್ಯಾಂಕ್ ಖಾತೆಗೆ ಪರಿಹಾರ ಧನವನ್ನು ಖಾನಾಪುರ ತಹಶೀಲ್ದಾರರ ಪಿ.ಡಿ. ಖಾತೆಯಿಂದ ಜಮಾ ಮಾಡಲಾಗಿದೆ.
ದುರಂತದ ಕುರಿತು ವರದಿಯನ್ನು ಪಡೆದುಕೊಂಡ ಕೆಲವೇ ಗಂಟೆಗಳಲ್ಲಿ ಮೃತರ ವಾರಸುದಾರರಿಗೆ ಪರಿಹಾರ ಧನವನ್ನು ನೀಡುವ ಮೂಲಕ ಜಿಲ್ಲಾಡಳಿತ ಅತ್ಯಂತ ತ್ವರಿತವಾಗಿ ಸ್ಪಂದಿಸಿದೆ.
Laxmi News 24×7