ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ ಇಲಾಖೆಗಳ ಕಚೇರಿಗಳಲ್ಲಿ ಪೂರ್ವಾನುಮತಿ ಇಲ್ಲದೆ ಸಾರ್ವಜನಿಕರು ಅನಧಿಕೃತವಾಗಿ ಫೋಟೋ, ವಿಡಿಯೋ ತೆಗೆಯುವುದನ್ನು ಸರ್ಕಾರ ನಿಷೇಧಿಸಿ ಆದೇಶ ಹೊರಡಿಸಿದ್ದು, ಈ ಆದೇಶವನ್ನು ತಡರಾತ್ರಿ ವಾಪಾಸ್ ಪಡೆದುಕೊಳ್ಳಲಾಗಿದೆ.
ನೌಕರರ ಮನವಿಯ ಮೇರೆಗೆ ಸರ್ಕಾರ ಆದೇಶ ಹೊರಡಿಸಿದ್ದು, ಆದೇಶಕ್ಕೆ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಸರ್ಕಾರಿ ಇಲಾಖೆಗಳ ಕಚೇರಿ ವೇಳೆಯಲ್ಲಿ ಖಾಸಗಿ ವ್ಯಕ್ತಿಗಳು ಫೋಟೋ, ವಿಡಿಯೋ ತೆಗೆಯಬಾರದು ಎನ್ನುವ ಆದೇಶವನ್ನು ತಡರಾತ್ರಿ ವಾಪಾಸ್ ಪಡೆಯಲಾಗಿದೆ.

Laxmi News 24×7