Breaking News

ಮುಂದಿನ ಬಿಜೆಪಿ ರಾಜ್ಯಾಧ್ಯಕ್ಷರ ಹೆಸರು ಫೈನಲ್. ಸಚಿವ ಸುನಿಲ್ ಕುಮಾರ್ ಗೆ ಒಲಿದ ಅದೃಷ್ಟ.

Spread the love

ಬೆಂಗಳೂರು: ಮುಂದಿನ ಬಿಜೆಪಿ ರಾಜ್ಯಾಧ್ಯಕ್ಷರ ಹೆಸರು ಫೈನಲ್ ಆಗಿದ್ದು, ಸಚಿವ ಸುನಿಲ್ ಕುಮಾರ್ ಅವರಿಗೆ ಅದೃಷ್ಟ ಒಲಿದು ಬಂದಿದೆ.

ನಳಿನ್ ಕುಮಾರ್ ಕಟೀಲ್ ಅವರ ಅಧಿಕಾರಾವಧಿ ಆಗಸ್ಟ್ ತಿಂಗಳಿನಲ್ಲಿ ಅಂತ್ಯವಾಗಲಿದೆ. ಈ ಹಿನ್ನೆಲೆಯಲ್ಲಿ ಇಂದು ಖಾಸಗಿ ರೆಸಾರ್ಟ್ ನಲ್ಲಿ ನಡೆದ ಬಿಜೆಪಿ ಚಿಂತನ ಮಂಥನ ಸಭೆಯಲ್ಲಿ ಸುನಿಲ್ ಕುಮಾರ್ ರನ್ನು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ಮಾಡಬೆಕು ಎಂದು ತೀರ್ಮಾನಿಸಲಾಗಿದೆ.

ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್‌ ಸಂತೋಷ್‌, ನಳಿನ್ ಕುಮಾರ್ ಕಟೀಲ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಪ್ರಮುಖ ನಾಯಕರು ಸಭೆಯಲ್ಲಿ ಭಾಗವಹಿಸಿದ್ದರು. ಸುನಿಲ್ ಕುಮಾರ್ ಅವರ ಹೆಸರನ್ನು ಅಧಿಕೃತವಾಗಿ ಘೋಷಣೆ ಮಾಡುವುದೊಂದೇ ಬಾಕಿ ಇದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ