ನದಿಗಳ ಪ್ರವಾಹಕ್ಕೆ ಶಾಶ್ವತ ಪರಿಹಾರ ನೀಡಲು ಚಿಂತನೆ ನಡೆದಿದೆ: ಸಿಎಂ ಬಸವರಾಜ್ ಬೊಮ್ಮಾಯಿ.
ರಾಜ್ಯದಲ್ಲಿ ಮಳೆ ಪ್ರವಾಹ ಹಿನ್ನೆಲೆಯಲ್ಲಿ ಈಗಾಗಲೇ ಪ್ರವಾಹ ಪೀಡಿತ ಜಿಲ್ಲೆಗಳ ಡಿಸಿ ಗಳ ಜೊತೆ ಸಭೆ ನಡೆಸಿದ್ದೇನೆ.
ಮಹಾರಾಷ್ಟ್ರ ಹಾಗೂ ನಮ್ಮ ರಾಜ್ಯದ ಡಿಸಿಗಳು ಸಂಪರ್ಕದಲ್ಲಿರುವಂತೆ ಸೂಚನೆ ನೀಡಲಾಗಿದೆ. ನದಿಗಳ ಪ್ರವಾಹಕ್ಕೆ ಶಾಶ್ವತ ಪರಿಹಾರ ನೀಡಲು ಚಿಂತನೆ ನಡೆದಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದರು.
ನಗರದ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು,ನೀರಿನ ಪ್ರಮಾಣಕ್ಕೆ ತಕ್ಕಂತೆ ಬಳಕೆಗೆ ಕುರಿತು ಯೋಜನೆ ರೂಪಿಸಲಾಗುತ್ತಿದೆ. ತಾಂತ್ರಿಕ ದೋಷದಿಂದ ಎರಡೂವರೇ ಲಕ್ಷ ಮನೆ ಮಂಜೂರಾತಿ ವಿಳಂಬವಾಗಿತ್ತು, ಈಗ ಅದನ್ನು ಸರಿಪಡಿಸಲಾಗಿದೆ. ಕಚ್ಚಾ ಮನೆಗಳನ್ನು ಪಕ್ಕಾ ಮಾಡಲು ಚಿಂತನೆ ನಡೆದಿದೆ ಎಂದರು.ರಾಜ್ಯದ ನೆರೆ ನಷ್ಟದ ಬಗ್ಗೆ ವರದಿ ತಯಾರಿಸಿ ಶೀಘ್ರವಾಗಿ ಕೇಂದ್ರಕ್ಕೆ ಸಲ್ಲಿಸಲಾಗುತ್ತೆ.ಈಗಾಗಲೇ ಎಲ್ಲಾ ಉಸ್ತುವಾರಿಗಳು ಅವರಿಗೆ ಸಂಬಂಧಪಟ್ಟ ಜಿಲ್ಲೆಯಲ್ಲಿ ಪ್ರವಾಹ ಕಾರ್ಯೋನ್ಮುಖ ರಾಗಿದ್ದು ನಿತ್ಯ ಅವರ ಸಂಪರ್ಕದಲ್ಲಿದ್ದೆನೆ ಎಂದರು.