Breaking News

ಸರಿಯಾದ ಒಳಚರಂಡಿ ವ್ಯವಸ್ಥೆಯಿಲ್ಲದೇ ಮನೆಗೆ ನೀರು ನುಗ್ಗಿ ತೊಂದರೆ, ಶಾಸಕರ ವಿರುದ್ಧ ಆಕ್ರೋಶ

Spread the love

ಬೆಳಗಾವಿ ನಗರದ ರಾಷ್ಟ್ರೀಯ ಹೆದ್ದಾರಿ 4ಕ್ಕೆ ಹೊಂದಿಕೊಂಡಿರುವ ಉಜ್ವಲ್ ನಗರದಲ್ಲಿ ಸರಿಯಾದ ಒಳಚರಂಡಿ ವ್ಯವಸ್ಥೆಯಿಲ್ಲದೇ ಹೈವೆ ಸೇರಿದಂತೆ ಸರ್ವೀಸ್ ರಸ್ತೆಯ ಮೇಲೆ ನೀರು ಹರಿಯುತ್ತಿದ್ದು ಅಕ್ಕ ಪಕ್ಕದ ನಿವಾಸಿಗಳ ಮನೆಗೆ ನೀರು ನುಗ್ಗಿ ತೊಂದರೆಯಾಗುತ್ತಿದೆ ಎಂದು ಸ್ಥಳೀಯ ನಿವಾಸಿಗಳು ಸ್ಥಳೀಯ ಶಾಸಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಳಗಾವಿ ನಗರದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ರಸ್ತೆಯ ಮೇಲೆಲ್ಲ ನೀರು ನಿಂತಿದ್ದು ವಾಹನ ಸವಾರರ ಕಷ್ಟ ಹೇಳತೀರದ್ದಾಗಿದೆ. ಇನ್ನು ರಾಷ್ಟ್ರೀಯ ಹೆದ್ದಾರಿ 4ರ ಪಕ್ಕದಲ್ಲಿರುವ ಉಜ್ವಲ್ ನಗರದಲ್ಲಿ ಸರಿಯಾದ ಒಳಚರಂಡಿಗಳಿಲ್ಲದ ಕಾರಣದಿಂದಾಗಿ ಮಳೆಯ ನೀರು ರಸ್ತೆಯ ಮೇಲೆಲ್ಲ ಹರಿದಾಡುತ್ತಿದೆ.

ಇದರಿಂದ ಸಾರ್ವಜನಿಕರಿಗೆ ಹಾಗೂ ವಾಹನ ಸವಾರರಿಗೆ ತೊಂದರೆಯಾಗುತ್ತಿದೆ. ಇನ್ನು ರಸ್ತೆಗಳೆಲ್ಲ ಈಜುಕೊಳಗಳಂತಾಗಿದ್ದು ಅಕ್ಕಪಕ್ಕದ ಮನೆಗಳಿಗೆ ನೀರು ನುಗ್ಗಿ ಜನರಿಗೆ ತೊಂದರೆಯಾಗುತ್ತಿದೆ. ಹಾಗಾಗಿ ಹಲವಾರು ಬಾರಿ ಈ ಕುರಿತಂತೆ ಸ್ಥಳೀಯ ಶಾಸಕರಿಗೆ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಸ್ಥಳೀಯ ಶಾಸಕರ ವಿರುದ್ಧ ಉಜ್ವಲ್‍ನಗರ ನಗರ ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.


Spread the love

About Laxminews 24x7

Check Also

ಕ್ರಾಂತಿ ಮಹಿಳಾ ಮಂಡಳ, ಉಮಾ ಸಂಗೀತ ಪ್ರತಿಷ್ಠಾನದಿಂದ ಸ್ವಾತಂತ್ರ್ಯ ದಿನಾಚರಣೆ ಮಕ್ಕಳಿಗೆ ದೇಶಾಭಿಮಾನ ಬೆಳೆಸಿ: ಸಂತೋಷ್ ಮಠಪತಿ

Spread the love ಬೆಳಗಾವಿ: ಪ್ರಾಥಮಿಕ ಹಂತದಲ್ಲೆ ಮಕ್ಕಳಿಗೆ ದೇಶಾಭಿಮಾನ ಬೆಳೆಸಿ, ದೇಶದ ಉತ್ತಮ ನಾಗರಿಕನನ್ನಾಗಿ ಮಾಡುವ ಜವಾಬ್ದಾರಿ ಪೋಷಕರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ