Breaking News
Home / new delhi / ಬಿಜೆಪಿ ಐಟಿ ಸೆಲ್ ಮುಖ್ಯಸ್ಥನಿಗೆ ಪ್ರಿಯಾಂಕ ವಾಸವಿದ್ದ ನಿವಾಸ

ಬಿಜೆಪಿ ಐಟಿ ಸೆಲ್ ಮುಖ್ಯಸ್ಥನಿಗೆ ಪ್ರಿಯಾಂಕ ವಾಸವಿದ್ದ ನಿವಾಸ

Spread the love

ನವದೆಹಲಿ,- ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾಸವಿದ್ದ ಬಂಗಲೆಯನ್ನು ಕೇಂದ್ರ ಸರ್ಕಾರವು ಬಿಜೆಪಿ ಐಟಿ ಸೆಲ್ ಮುಖ್ಯಸ್ಥನಿಗೆ ನೀಡಿದೆ.

ಪ್ರಿಯಾಂಕ ಗಾಂಧಿ ವಾಸವಿದ್ದ ಬಂಗಲೆ ತನಗೆ ಬೇಕು ಎಂದು ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅನಿಲ್ ಬಾಲುನಿ ಸರ್ಕಾರಕ್ಕೆ ಮನವಿ ಮಾಡಿದ್ದರು. ಅವರ ಬೇಡಿಕೆಯನ್ನು ಪರಿಗಣಿಸಿರುವ ಕೇಂದ್ರ ಸರ್ಕಾರ ಸಮ್ಮತಿ ಸೂಚಿಸಿರುವುದರಿಂದ ಅನಿಲ್ ಇದೀಗ ಈ ಬಂಗಲೆಯನ್ನು ತಮದಾಗಿಸಿಕೊಂಡಿದ್ದಾರೆ.

ಲೋಧಿ ಎಸ್ಟೇಟ್ ನಲ್ಲಿರುವ 35ನೇ ನಂಬರಿನ ಬಂಗಲೆಯನ್ನು ಪ್ರಿಯಾಂಕ ಗಾಂಧಿ ಖಾಲಿ ಮಾಡುವಂತೆ ಕೇಂದ್ರ ಸರ್ಕಾರ ಸೂಚನೆ ನೀಡಿತ್ತು. ಹೀಗಾಗಿ ಪ್ರಿಯಾಂಕ ಗಾಂಧಿ ಬಾಕಿ ಉಳಿಸಿಕೊಂಡಿದ್ದ 3,46,677 ರೂ. ಹಣವನ್ನು ಪಾವತಿಸಿ ಬಂಗಲೆ ಖಾಲಿ ಮಾಡಿದ್ದಾರೆ.

ಈಗ ಖಾಲಿಯಿರುವ ಬಂಗಲೆಯನ್ನು ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅನಿಲ್‍ಬಾಲುನಿಗೆ ನೀಡಲಾಗಿದೆ.


Spread the love

About Laxminews 24x7

Check Also

ಜಾರಕಿಹೊಳಿ ಸಾಮ್ರಾಜ್ಯ ನಿರ್ಮಿಸುವಲ್ಲಿ ಕಲಾಲ ಸಮಾಜದ ಕೊಡುಗೆ ಅಪಾರ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

Spread the love  ಮೂಡಲಗಿ : ಕಳೆದ ಐದು ದಶಕಗಳ ಹಿಂದೆ ನಮ್ಮ ಕುಟುಂಬ ಸ್ಥಾಪಿಸಿರುವ ಸಾಮ್ರಾಜ್ಯದಲ್ಲಿ ಕಲಾಲ ಸಮಾಜದವರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ