Breaking News

ಬೆಂಗಳೂರು: ಶಾಸಕ ಜಮೀರ್ ಅಹ್ಮದ್ ಖಾನ್ ಗೆ ವಿಚಾರಣೆಗೆ ಹಾಜರಾಗುವಂತೆ ಎಸಿಬಿ ನೋಟಿಸ್

Spread the love

ಬೆಂಗಳೂರು: ಅಕ್ರಮ ಆಸ್ತಿ ಪಾಸ್ತಿ ಪತ್ತೆಯಾದ ಹಿನ್ನಲೆಯಲ್ಲಿ ಶಾಸಕ ಜಮೀರ್ ಅಹ್ಮದ್ ಖಾನ್ ಗೆ ವಿಚಾರಣೆಗೆ ಹಾಜರಾಗುವಂತೆ ಎಸಿಬಿ ನೋಟಿಸ್ ನೀಡಿದೆ.

ಈ ಸಂಬಂಧ ಬೆಂಗಳೂರಿನ ಎಸಿಬಿ ಅಧಿಕಾರಿಗಳು ನೋಟಿಸ್ ಜಾರಿಗೊಳಿಸಿದ್ದು, ಶೀಘ್ರವೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನಲ್ಲಿ ಸೂಚಿಸಿದ್ದಾರೆ.

 

ಜುಲೈ.5ರಂದು ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಖಾನ್ ಮನೆ, ಕಚೇರಿಗಳ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದರು. ಈ ವೇಳೆ 87.54 ಕೋಟಿ ಅಕ್ರಮ ಆಸ್ತಿ-ಪಾಸ್ತಿ ಪತ್ತೆಯಾಗಿತ್ತು.

ದಾಳಿಯ ಬಳಿಕ ವಿಚಾರಣೆಗೆ ಹಾಜರಾಗುವಂತೆ ಶಾಸಕ ಜಮೀರ್ ಅಹ್ಮದ್ ಖಾನ್ ಗೆ ಎಸಿಬಿ ಸೂಚಿಸಿತ್ತು. ಆದ್ರೇ ಬಕ್ರೀದ್ ಹಬ್ಬದ ಬಳಿಕ ವಿಚಾರಣೆಗೆ ಹಾಜರಾಗೋದಾಗಿ ತಿಳಿಸಿದ್ದರು. ಇದೀಗ ಹಬ್ಬದ ಬಳಿಕ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದೆ.


Spread the love

About Laxminews 24x7

Check Also

ಮೈಸೂರಿನಿಂದ ಉದಯಪುರಕ್ಕೆ ತೆರಳುತ್ತಿದ್ದ ರೈಲಿನ ಇಂಜಿನ್​ನಲ್ಲಿ ಬೆಂಕಿ ಕಾಣಿಸಿಕೊಂಡು ಆತಂಕ ಸೃಷ್ಟಿಯಾಗಿತ್ತು.

Spread the loveರಾಮನಗರ: ಬೊಂಬೆನಗರಿ ಚನ್ನಪಟ್ಟಣದ ಬಳಿ ಚಲಿಸುತ್ತಿದ್ದ ರೈಲಿನ ಇಂಜಿನ್​​ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಇಂದು (ಗುರುವಾರ) ನಡೆದಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ