Breaking News

ಜನರು ಆಶೀರ್ವಾದ ಮಾಡಿದಾಗ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ. ಎಲ್ಲರಿಗೂ ಮುಖ್ಯಮಂತ್ರಿ ಆಗುವ ಆಸೆ ಇರುತ್ತದೆ : ಮಾಧುಸ್ವಾಮಿ

Spread the love

ಅಥಣಿ (ಬೆಳಗಾವಿ): ಎಲ್ಲರಿಗೂ ಸಿಎಂ ಆಗೋಕೆ ಆಸೆ ಇರುತ್ತದೆ. ಸಿದ್ದರಾಮಯ್ಯ ಅವರಿಗೂ ಆಸೆಯಿದೆ. ಜನರು ಆಶೀರ್ವಾದ ಮಾಡಿದಾಗ ಮಾತ್ರ ಮುಖ್ಯಮಂತ್ರಿ ಆಗುವುದಕ್ಕೆ ಸಾಧ್ಯ. ಈಗಾಗಲೇ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದಾರೆ, ಇನ್ನೊಮ್ಮೆ ಸಿಎಂ ಆಗ್ಬೇಕು ಅಂತ ಆಸೆ ವ್ಯಕ್ತಪಡಿಸುತ್ತಿದ್ದಾರೆ. ಇದಕ್ಕೆ ಜನರು ತೀರ್ಮಾನ ಮಾಡಬೇಕೆಂದು ಎಂದು ಚಿಕ್ಕ ನೀರಾವರಿ ಹಾಗೂ ಕಾನೂನು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ ಮಾಧುಸ್ವಾಮಿ ಹೇಳಿದರು.

Thumbnail image

 

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬಾಡಗಿ ಗ್ರಾಮದಲ್ಲಿ ಕೆರೆ ತುಂಬಿಸುವ ಯೋಜನೆಗೆ ಚಾಲನೆ ನೀಡಿ ಮಾತನಾಡಿದರು. ಅಥಣಿ ಶಾಸಕ ಮಹೇಶ್ ಕುಮಟಳ್ಳಿ ಅವರು ಕಾರ್ಯಕ್ರಮದಲ್ಲಿ ಭಾಗಿ ಆಗಿರಲಿಲ್ಲ. ಇದಕ್ಕೆ ಸಮಜಾಯಿಶಿ ನೀಡಿದ ಸಚಿವರು, ರಾಷ್ಟ್ರಪತಿ ಚುನಾವಣೆಯ ವಿಪ್ ಜಾರಿಯಾಗಿದೆ, ಇದರಿಂದಾಗಿ ಅವರು ಬೆಂಗಳೂರಿನಲ್ಲಿ ಇದ್ದಾರೆ. ನಮಗೆ ಏರ್ಪೋರ್ಟ್ ಟಿಕೆಟ್ ಇರುವುದರಿಂದ ನಾವು ಬಂದೆವು ಎಂದರು.


Spread the love

About Laxminews 24x7

Check Also

ಚಿಕ್ಕೋಡಿ ನಗರದಲ್ಲಿರುವ ಸಂಸದರ ಕಚೇರಿಯಲ್ಲಿ ಇಂದು 79ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಧ್ವಜಾರೋಹಣವನ್ನು ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರು ನೆರವೇರಿಸಿದರು.

Spread the love ಚಿಕ್ಕೋಡಿ ನಗರದಲ್ಲಿರುವ ಸಂಸದರ ಕಚೇರಿಯಲ್ಲಿ ಇಂದು 79ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಧ್ವಜಾರೋಹಣವನ್ನು ಸಂಸದೆ ಪ್ರಿಯಾಂಕಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ