Breaking News

ಸರ್ವಪಕ್ಷ ಸಭೆಗೆ ಪ್ರಧಾನಿ ಗೈರು : ಜೈರಾಮ್ ರಮೇಶ್ ಗೆ ಸಚಿವ ಜೋಶಿ ತಿರುಗೇಟು

Spread the love

ನವದೆಹಲಿ: ಸರ್ವಪಕ್ಷ ಸಭೆ ವಿಚಾರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ವಾಕ್ಸಮರ ನಡೆದಿದ್ದು, ಪ್ರಧಾನಿ ಯಾಕೆ ಸಭೆಗೆ ಹಾಜರಾಗಿಲ್ಲ ಎಂದು ಕಾಂಗ್ರೆಸ್‌ನ ಹಿರಿಯ ನಾಯಕ ಜೈರಾಮ್ ರಮೇಶ್ ಪ್ರಶ್ನಿಸಿದ್ದಾರೆ.

ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಅವರು ತಿರುಗೇಟು ನೀಡಿದ್ದು,ಇಂದು ಸಭೆಗೆ ಪ್ರಧಾನಿ ಹಾಜರಾಗಿಲ್ಲ ಎಂದು ಕಾಂಗ್ರೆಸ್‌ನ ಜೈರಾಮ್ ರಮೇಶ್ ವಿಷಯ ಪ್ರಸ್ತಾಪಿಸಿದ್ದಾರೆ.

2014ಕ್ಕಿಂತ ಮೊದಲು ಪ್ರಧಾನಿ ಸರ್ವಪಕ್ಷ ಸಭೆಗೆ ಹಾಜರಾಗುತ್ತಿರಲಿಲ್ಲ ಎಂದು ನಾನು ಅವರಿಗೆ ಹೇಳಲು ಬಯಸುತ್ತೇನೆ. ಮನಮೋಹನ್ ಸಿಂಗ್ ಎಷ್ಟು ಬಾರಿ ಸರ್ವಪಕ್ಷ ಸಭೆಗೆ ಹಾಜರಾಗಿದ್ದರು ಎಂದು ಪ್ರಶ್ನಿಸಿದರು.

ಸಂಸತ್ತಿನ ಮುಂಗಾರು ಅಧಿವೇಶನಕ್ಕೆ ಮುನ್ನ ಸರ್ಕಾರ ಕರೆದಿದ್ದ ಸರ್ವಪಕ್ಷ ಸಭೆಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಮತ್ತು ಇತರರು ಭಾಗಿಯಾಗಿದ್ದರು.


Spread the love

About Laxminews 24x7

Check Also

ನಮ್ಗೆ 1 ವೋಟು, ಅಂಬಾನಿಗೆ 1 ಲಕ್ಷ ವೋಟ್‌ ಇರುತ್ತಾ? – ವಿಪಕ್ಷಗಳಿಗೆ ತೇಜಸ್ವಿ ಸೂರ್ಯ ತರಾಟೆ

Spread the loveನವದೆಹಲಿ: ಲೋಕಸಭೆ ಹಾಗೂ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ.33 ರಷ್ಟು ಮೀಸಲಾತಿ ಕಲ್ಪಿಸಲು ಕ್ಷೇತ್ರ ಪುನರ್‌ವಿಂಗಡಣೆಗಾಗಿ ಸಂವಿಧಾನ (131ನೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ