Breaking News

ಸೆಲ್ಫಿ ಕ್ಲಿಕ್ಕಿಸಿಕೊಳ್ಳುವ ವೇಳೆ ನೀರುಪಾಲಾದ

Spread the love

ಹುಬ್ಬಳ್ಳಿ: ಸೆಲ್ಫಿ ತೆಗೆದುಕೊಳ್ಳಲು ಹೋಗಿ ಯುವಕನೋರ್ವ ನೀರುಪಾಲಾದ ಘಟನೆ ಕಲಘಟಗಿ ತಾಲೂಕಿನ ನೀರಸಾಗರದ ಜಲಾಶಯದಲ್ಲಿ ನಡೆದಿದೆ. ಕಿರಣ ರಜಪೂತ(22) ನೀರಲ್ಲಿ ಕೊಚ್ಚಿ ಹೋಗಿರುವ ಯುವಕ.

ಕಲಘಟಗಿ ತಾಲೂಕಿನ ಬೇಗೂರು ಗ್ರಾಮದ‌ ಕಿರಣ ಇಂದು ಗೆಳೆಯರೊಡನೆ ಪ್ರವಾಸಕ್ಕೆಂದು ಹೋಗಿದ್ದರು. ಈ ಸಮಯದಲ್ಲಿ ಸೆಲ್ಫಿಗಾಗಿ ನೀರಸಾಗರ ಜಲಾಶಯದ ದಡದಲ್ಲಿ ನಿಂತಿದ್ದರು. ಈ ವೇಳೆ ನೀರಿನ ರಭಸ ಹೆಚ್ಚಾಗಿದ್ದರಿಂದ ಕಿರಣ ಕೊಚ್ಚಿ ಹೋಗಿದ್ದಾರೆ. ಯುವಕನಿಗಾಗಿ ಅಗ್ನಿಶಾಮಕ ಸಿಬ್ಬಂದಿ ಹಾಗೂ ಸ್ಥಳೀಯರು ಕಾರ್ಯಾಚರಣೆ ನಡೆಸಿದ್ದಾರೆ. ಈ ಕುರಿತು ಕಲಘಟಗಿ‌ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ನೈಋತ್ಯ ರೈಲ್ವೆ ಟಿಕೆಟ್ ಪರಿಶೀಲನೆ ಪ್ರಕರಣ, ದಂಡ ಸಂಗ್ರಹದಲ್ಲಿ ಹೆಚ್ಚಳ

Spread the loveಹುಬ್ಬಳ್ಳಿ: ನೈಋತ್ಯ ರೈಲ್ವೆ ತನ್ನ ವ್ಯಾಪ್ತಿಯಾದ್ಯಂತ ಟಿಕೆಟ್ ಪರಿಶೀಲನೆ ಮತ್ತು ನಿಯಮ ಜಾರಿ ಕಾರ್ಯಾಚರಣೆಯನ್ನು ತೀವ್ರಗೊಳಿಸಿದ ಪರಿಣಾಮವಾಗಿ, ಈ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ