Breaking News

ಹಿಂಬದಿಯಿಂದ ಲಾರಿ ಡಿಕ್ಕಿ, ಕಾರ್ ಅಪ್ಪಚ್ಚಿ- ಮೂವರು ದಾರುಣ ಸಾವು

Spread the love

ಚಿಕ್ಕಬಳ್ಳಾಪುರ: ಬೆಳ್ಳಂ ಬೆಳಗ್ಗೆ ಭೀಕರ ಅಪಘಾತ ಸಂಭವಿಸಿದ್ದು, ಮೂವರು ಸ್ಥಳದಲ್ಲೇ ಸಾವನ್ನಪ್ಪಿದರೆ, ಮತ್ತೊಬ್ಬರ ಸ್ಥಿತಿ ಗಂಭೀರವಾಗಿದೆ.

ಚಿಕ್ಕಬಳ್ಳಾಪುರ ತಾಲೂಕು ದೊಡ್ಡಪ್ಯಾಯಲಗುರ್ಕಿ ಬಳಿ ರಾತ್ರಿ 1 ಗಂಟೆಗೆ ಘಟನೆ ಸಂಭವಿಸಿದ್ದು, ಹಿಂಬದಿಯಿಂದ ಲಾರಿ ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದಿದ್ದು, ಡಿಕ್ಕಿ ರಭಸಕ್ಕೆ ತಾಯಿ ಹಾಗೂ ಇಬ್ಬರು ಗಂಡು ಮಕ್ಕಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ತಂದೆ ಸ್ಥಿತಿ ಗಂಭೀರವಾಗಿದ್ದು, ಬೆಂಗಳೂರಿನ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಲಾರಿ ಡಿಕ್ಕಿ ಹೊಡೆತಕ್ಕೆ ಕಾರು ನಜ್ಜುಗುಜ್ಜಾಗಿದ್ದು, ಗುರುತಿಸಲು ಸಹ ಸಾಧ್ಯವಾಗದಷ್ಟು ಅಪ್ಪಚ್ಚಿಯಾಗಿದೆ.

ಮೃತರು ಹೈದರಾಬಾದ್ ಮೂಲದವರು ಎಂದು ಗುರುತಿಸಲಾಗಿದೆ. ಬೆಂಗಳೂರಿನಿಂದ ಹೈದರಾಬಾದ್ ಗೆ ಪ್ರಯಾಣ ಮಾಡುತ್ತಿರುವಾಗ ಈ ಅವಘಡ ಸಂಭವಿಸಿದೆ. ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಸ್ಥಳದಲ್ಲೇ ಮೂವರು ದಾರುಣವಾಗಿ ಸಾವನ್ನಪ್ಪಿದ್ದಾರೆ.


Spread the love

About Laxminews 24x7

Check Also

2000 ಕೋಟಿ ವೆಚ್ಚದ ಅಭಿವೃದ್ಧಿ ಕೆಲಸಗಳನ್ನು ಹಣವಿಲ್ಲದೆ ಮಾಡಲು ಸಾಧ್ಯವೇ ?: ಮುಖ್ಯಮಂತ್ರಿ ಸಿದ್ದರಾಮಯ್ಯ*

Spread the love 2000 ಕೋಟಿ ವೆಚ್ಚದ ಅಭಿವೃದ್ಧಿ ಕೆಲಸಗಳನ್ನು ಹಣವಿಲ್ಲದೆ ಮಾಡಲು ಸಾಧ್ಯವೇ ?: ಮುಖ್ಯಮಂತ್ರಿ ಸಿದ್ದರಾಮಯ್ಯ ಚಿಕ್ಕಬಳ್ಳಾಪುರ(ಶಿಡ್ಲಘಟ್ಟ), …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ