Breaking News

2023ರ ಚುನಾವಣೆ ಬಳಿಕ ಮತ್ತೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ,ಯಾವ ಸ್ಥಾನಮಾನ, ಹುದ್ದೆಯೂ ನನಗೆ ಬೇಡ.: ಸಿದ್ದರಾಮಯ್ಯ

Spread the love

ಮೈಸೂರು: 2023ರ ಚುನಾವಣೆ ಬಳಿಕ ಮತ್ತೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ. ಯಾವ ಸ್ಥಾನಮಾನ, ಯಾವುದೇ ಹುದ್ದೆಯೂ ನನಗೆ ಬೇಡ. ಮತ್ತೆ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸ್ಪರ್ಧಿಸುವುದಿಲ್ಲ.

ನನ್ನನ್ನು ಖುಷಿಪಡಿಸಲೆಂದು ಈ ವಿಚಾರ ಮತ್ತೆ ಪ್ರಸ್ತಾಪ ಮಾಡಬೇಡಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.

ನಗರದ ಕಾಂಗ್ರೆಸ್‌ ಕಚೇರಿಯಲ್ಲಿ ರವಿವಾರ ಜರಗಿದ ಚಾಮುಂಡೇಶ್ವರಿ ಮತ್ತು ಇಳವಾಲ, ಜಯಪುರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ ಮುಂಚೂಣಿ ಘಟಕಗಳ ಪದಗ್ರಹಣ ಸಮಾರಂಭದಲ್ಲಿ ಅವರು ಈ ವಿಷಯ ತಿಳಿಸಿದರು.

ಕಾರ್ಯಕ್ರಮದ ಆರಂಭದಲ್ಲಿ ಕೆಪಿಸಿಸಿ ಸದಸ್ಯ ಕೆ.ಮರಿಗೌಡ ಮಾತನಾಡಿ, ಸಿದ್ದರಾಮಯ್ಯ ಅವರು ಮತ್ತೆ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸ್ಪರ್ಧಿಸಬೇಕೆಂದು ಒತ್ತಾಯಿಸಿದರು. ಈ ವೇಳೆ ಅಲ್ಲಿಯೇ ಇದ್ದ ಕಾಂಗ್ರೆಸ್‌ ಮುಖಂಡ ಬಸವರಾಜು, ಮತ್ತೆ ಚಾಮುಂಡೇಶ್ವರಿಗೆ ಕರೆದು ಅಪಮಾನ ಮಾಡುವುದಕ್ಕಾ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದಕ್ಕೆ ಪ್ರತಿಯಾಗಿ ಸೂರಿ ಎಂಬಾತ ಆಗಿರುವ ತಪ್ಪನ್ನು ಸರಿಪಡಿಸಲು ತಾವು ಮತ್ತೆ ಸ್ಪರ್ಧೆ ಮಾಡಬೇಕೆಂದು ಒತ್ತಾಯಿಸಿದರು. ತಮ್ಮ ಬೆಂಬಲಿಗರೇ ಅನ್ಯಾಯ ಮಾಡಿದರೆಂದು ಮತ್ತೊಬ್ಬರು ಜೋರು ದನಿಯಲ್ಲಿ ಹೇಳಿದರು. ಇದರಿಂದ ಕಾರ್ಯಕ್ರಮದಲ್ಲಿ ಕೆಲ ಕ್ಷಣ ಗೊಂದಲ ನಿರ್ಮಾಣವಾಯಿತು.

 


Spread the love

About Laxminews 24x7

Check Also

ಕುಪ್ಪಟಗಿರಿ ಕ್ರಾಸ್ ಬಳಿ ಹೊಸ ಟ್ರಾನ್ಸ್’ಫಾರ್ಮರ್ ಲೋಕಾರ್ಪಣೆಗೊಳಿಸಿದ ಮಾಜಿ ಶಾಸಕ ಅರವಿಂದ ಪಾಟೀಲ್

Spread the love ಕುಪ್ಪಟಗಿರಿ ಕ್ರಾಸ್ ಬಳಿ ಹೊಸ ಟ್ರಾನ್ಸ್’ಫಾರ್ಮರ್ ಲೋಕಾರ್ಪಣೆಗೊಳಿಸಿದ ಮಾಜಿ ಶಾಸಕ ಅರವಿಂದ ಪಾಟೀಲ್ ಖಾನಾಪೂರ ತಾಲೂಕಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ