Breaking News

ಬೆಳಗಾವಿನಗರದ ಜೀವನಾಡಿ ರಕ್ಕಸಕೊಪ್ಪ ಡ್ಯಾಂ ಭರ್ತಿ

Spread the love

ಬೆಳಗಾವಿ: ಮಹಾರಾಷ್ಟ್ರದ ಪಶ್ಚಿಮಘಟ್ಟ ಪ್ರದೇಶದಲ್ಲಿ (Maharashtra Western hills) ಧಾರಾಕಾರ ಮಳೆ (Rainfall) ಮುಂದುವರಿದಿದ್ದು, ಬೆಳಗಾವಿ ಜಿಲ್ಲೆಯ ನದಿಗಳು (Belagavi Rivers) ಮೈದುಂಬಿ ಹರಿಯುತ್ತಿವೆ.

ಬೆಳಗಾವಿ ಜಿಲ್ಲೆಯ ಮಲಪ್ರಭಾ (Malaprabha), ಘಟಪ್ರಭಾ (Ghataprabha), ಮಾರ್ಕಂಡೇಯ (Markandeya) ನದಿಗೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದೆ‌.‌ ಇದೇ ರೀತಿ ಇನ್ನೂ ಹದಿನೈದು ದಿನಗಳ ಕಾಲ ಮಳೆ ಮುಂದುವರಿದರೆ ನದಿಪಾತ್ರದ ಗ್ರಾಮಗಳಲ್ಲಿ ಪ್ರವಾಹ ಭೀತಿ ಉಂಟಾಗಲಿದೆ.

ಸದ್ಯ ಪಶ್ಚಿಮಘಟ್ಟ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು ಬೆಳಗಾವಿ ತಾಲೂಕಿನ ರಕ್ಕಸಕೊಪ್ಪ ಜಲಾಶಯ (Rakkasakoppa Dam) ಭರ್ತಿಯಾಗಿದೆ‌.

ಅರ್ಧ ಟಿಎಂಸಿ ಸಾಮರ್ಥ್ಯ 2475 ಅಡಿಯ ರಕ್ಕಸಕೊಪ್ಪ ಜಲಾಶಯ ಭರ್ತಿಯಾಗುವ ಹಂತಕ್ಕೆ ತಲುಪಿದ್ದು ಮುಂಜಾಗ್ರತಾ ಕ್ರಮವಾಗಿ ರಕ್ಕಸಕೊಪ್ಪ ಜಲಾಶಯದ 6 ಗೇಟ್‌ಗಳ ಪೈಕಿ ಮೂರು ಗೇಟ್‌ಗಳಿಂದ ಅಲ್ಪ ಪ್ರಮಾಣದಲ್ಲಿ ನೀರನ್ನು ಮಾರ್ಕಂಡೇಯ ನದಿಗೆ ಹರಿಬಿಡಲಾಗುತ್ತಿದೆ‌.


Spread the love

About Laxminews 24x7

Check Also

ಶಾಸಕ ಭರಮಗೌಡ (ರಾಜು) ಕಾಗೆಗೆ ಒಲಿದು ಬಂದ ಅದೃಷ್ಟ

Spread the love  ಸಚಿವ ಸತೀಶ್ ಜಾರಕಿಹೊಳಿಯವರ ಮಧ್ಯಸ್ಥಿಕೆಯಲ್ಲಿ ನಡೆದ ಕಾಗವಾಡ ಕ್ಷೇತ್ರದ ಅವಿರೋಧ ಆಯ್ಕೆ- ಶಾಸಕ ಬಾಲಚಂದ್ರ ಜಾರಕಿಹೊಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ