ಬೈಲಹೊಂಗಲ ಪಟ್ಟಣದ ವಿವಿಧ ಅಂಗಡಿಗಳ ಮೇಲೆ ಸೋಮವಾರ ಪುರಸಭೆಯ ಆರೋಗ್ಯ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿ ಸುಮಾರು ೧೫೦ ಕೆ.ಜಿ ಪ್ಲಾಸ್ಟಿಕ್ ವಶಪಡಿಸಿಕೊಂಡು ರೂ. ೨೩ ಸಾವಿರ ದಂಡ ವಿದಿಸಿ ಪ್ಲಾಸ್ಟಿಕ್ ಬಳಕೆ ಹಾಗೂ ಮಾರಾಟ ಮಾಡದಿರುವ ಬಗ್ಗೆ ಎಚ್ಚರಿಕೆ ನೀಡಿದರು.
ಪುರಸಭೆ ಮುಖ್ಯಾಧಿಕಾರಿ ಕವಿರಾಜ ನಾಗನೂರ ಮಾತನಾಡಿ, ಪರಿಸರಕ್ಕೆ ಮಾರಕವಾಗಿರುವ ಪ್ಲಾಸ್ಟಿಕ್ ಮಾರಾಟ ಹಾಗೂ ಬಳಕೆಯನ್ನು ಜುಲೈ ೧ ರಿಂದ ಸುಪ್ರೀಂ ಕೋರ್ಟ ಆದೇಶದ ಮೇರೆಗೆ ಕೇಂದ್ರ ಸರ್ಕಾರ ದೇಶಾದ್ಯಂತ ಪ್ಲಾಸ್ಟಿಕ್ ಮಾರಾಟ ಹಾಗೂ ಬಳಕೆ ಮಾಡುವುದನ್ನು ನಿಷೇಧಿಸಿದೆ.
ರಾಜ್ಯದಲ್ಲಿ ಸಹ ಜುಲೈ ೧ರಿಂದ ಪ್ಲಾಸ್ಟಿಕ್ ನಿಷೇಧsÀ ಜಾರಿಯಲ್ಲಿದ್ದು ಉತ್ತಮ ಪರಿಸರಕ್ಕಾಗಿ ಅಂಗಡಿ ಮಾಲೀಕರು ಪ್ಲಾಸ್ಟಿಕ್ ಕವರ್‌ಗಳಲ್ಲಿ ವಸ್ತುಗಳನ್ನು ಮಾರಾಟ ಮಾಡುವುದು ಕಂಡು ಬಂದಲ್ಲಿ ಯಾವುದೇ ಮುಲಾಜಿಲ್ಲದೆ ಪ್ಲಾಸ್ಟಿಕ್ ಕರ‍್ಗಳನ್ನು ವಶಪಡಿಸಿಕೊಂಡು ದಂಡ ವಿಧಿಸಲಾಗವುದು ಎಂದರು.