Breaking News

ಭಿಕ್ಷಾಟನೆ ನಿಷೇಧ ಕಾಯ್ದೆಯನ್ನು ಸಂಪೂರ್ಣವಾಗಿ ಜಾರಿ: ಕೋಟ ಶ್ರೀನಿವಾಸ ಪೂಜಾರಿ

Spread the love

ಬೆಂಗಳೂರು: ಭಿಕ್ಷಾಟನೆ ನಿಷೇಧ ಕಾಯ್ದೆಯನ್ನು ಸಂಪೂರ್ಣವಾಗಿ ಜಾರಿಗೆ ತರಲಾಗುವುದು ಎಂದು ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

ಸೋಮವಾರ ವಿಕಾಸಸೌಧದಲ್ಲಿ ಭಿಕ್ಷಾಟನೆ ನಿರ್ಮೂಲನೆ ಸಂಬಂಧ ಗೃಹ ಸಚಿವರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು, ಕಾರ್ಮಿಕ ಇಲಾಖೆ ಸಚಿವರು, ಕಾನೂನು ಸೇವಾ ಪ್ರಾಧಿಕಾರ, ಬೆಂಗಳೂರು ಮಹಾನಗರ ಪಾಲಿಕೆ ಸೇರಿದಂತೆ ವಿವಿಧ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಭಿಕ್ಷಾಟನೆ ಹೆಸರಿನಲ್ಲಿ ವಿವಿಧ ಕಾನೂನು ಬಾಹಿರ ಕೃತ್ಯಗಳು ನಡೆಯುವುದನ್ನು ಇಲಾಖೆ ಗುರುತಿಸಿದೆ.

ವಿಶೇಷವಾಗಿ ಮಕ್ಕಳಿಗೆ ನಿಷೇಧಿತ ಮತ್ತು ಬರುವ ಮದ್ದು ನೀಡಿ ಭಿಕ್ಷಾಟನೆಗೆ ಬಳಸಿಕೊಳ್ಳುವುದು, ಅಂಗವಿಕಲರನ್ನಾಗಿ ಮಾಡಿ ಭಿಕ್ಷಾಟನೆಗೆ ಬಳಸಿಕೊಳ್ಳುತ್ತಿರುವುದು ಕಂಡು ಬಂದಿದ್ದು, ಇದನ್ನು ಸಂಪೂರ್ಣವಾಗಿ ನಿಯಂತ್ರಿಸಲು ಭಿಕ್ಷಾಟನೆ ನಿಷೇಧ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿ ಮಾಡಲಾಗುವುದು ಎಂದರು.

ಭಿಕ್ಷಾಟನೆಯಲ್ಲಿ ತೊಡಗಿದವರನ್ನು ರಕ್ಷಿಸಿ ಅವರಿಗೆ ಪುನರ್ವಸತಿ ಕಲ್ಪಿಸುವ ಸಂಬಂಧ ಹಾಗೂ ಈ ಚಟುವಟಿಕೆಯಲ್ಲಿ ಗೃಹ ಇಲಾಖೆ, ಮಹಿಳಾ ಮತ್ತು ಮಕ್ಕಳ ಇಲಾಖೆ, ಕಾರ್ಮಿಕ ಇಲಾಖೆಗಳ ಪಾತ್ರ ಹಾಗೂ ಸಹಕಾರದ ಬಗ್ಗೆ ಸಭೆಯಲ್ಲಿ ವಿಸ್ತೃತ ಚರ್ಚೆ ಮಾಡಲಾಗಿದೆ. ಭಿಕ್ಷಾಟನೆ ನಿರ್ಮೂಲನೆಗೆ ಸಂಬಂಧಿಸಿದ ಇಲಾಖೆಗಳು ಸಂಪೂರ್ಣವಾಗಿ ಸಹಕಾರ ನೀಡಲಿವೆ ಎಂದರು.

ಇಲಾಖೆ ಅಧಿಕಾರಿಗಳೊಂದಿಗೆ ಈಗಾಗಲೆ ಐದು ಬಾರಿ ಈ ಕುರಿತು ಚರ್ಚೆ ನಡೆಸಿದ್ದು, ಬೆಂಗಳೂರಿನಲ್ಲಿ 50ರಿಂದ 70ಕಡೆಗಳಲ್ಲಿ ಭಿಕ್ಷಾಟನೆ ವ್ಯಾಪಕವಾಗಿರುವುದನ್ನು ಗುರುತಿಸಲಾಗಿದೆ. ಈಗಾಗಲೇ ಮಕ್ಕಳ ರಕ್ಷಣಾ ನಿರ್ದೇಶನಾಲಯದಿಂದ ಭಿಕ್ಷಾಟನೆಯಲ್ಲಿ ತೊಡಗಿದ್ದ 101 ಮಕ್ಕಳನ್ನು ವಶಕ್ಕೆ ಪಡೆದಿದ್ದು ಅವರಿಗೆ ಪುನರ್ವಸತಿ ಕಲ್ಪಿಸಲಾಗಿದೆ. ಅಲ್ಲದೆ ಕಾನೂನು ಸೇವಾ ಪ್ರಾಧಿಕಾರದಿಂದ 720 ಮಕ್ಕಳು ಭಿಕ್ಷಾಟನೆಯಲ್ಲಿ ತೊಡಗಿರುವ ಬಗ್ಗೆ ವರದಿ ನೀಡಿದ್ದಾರೆ. ಈ ಎಲ್ಲ ಮಾಹಿತಿಯನ್ನಾಧರಿ ಸೂಕ್ತ ಕ್ರಮ ವಹಿಸಲಾಗುವುದು ಎಂದು ಸಚಿವರು ತಿಳಿಸಿದರು.

ಬೆಂಗಳೂರಿನಲ್ಲಿ ಭಿಕ್ಷಾಟನೆ ಸಂಬಂಧ ವ್ಯಾಪಕವಾಗಿರುವುದನ್ನು ಗಮನಿಸಲಾಗಿದ್ದು ಭಿಕ್ಷಾಟನೆ ನಿಯಂತ್ರಣಕ್ಕೆ ನಿರ್ಧಾಕ್ಷಿಣ್ಯವಾಗಿ ಕ್ರಮಗಳನ್ನು ಕೈಗೊಳ್ಳಲಾಗುವುದು. ಈಗಾಗಲೆ ಬೆಂಗಳೂರಿನ ಎಂಟು ಪೊಲೀಸ್ ವಿಭಾಗಗಳಲ್ಲಿ ತಂಡಗಳನ್ನು ರಚಿಸಿ ಈ ಬಗ್ಗೆ ಕಾರ್ಯಯೋಜನೆಯನ್ನು ಸಿದ್ಧಪಡಿಸಲಾಗಿದೆ. ಮಕ್ಕಳನ್ನು ಭಿಕ್ಷಾಟನೆಗಾಗಿ ಬೀದಿಗೆ ಬಿಡುವವರ ವಿರುದ್ಧವೂ ಕೇಸು ದಾಖಲಿಸಲಾಗುವುದು ಎಂದರು.


Spread the love

About Laxminews 24x7

Check Also

ಸರ್ಕಾರ ಸಲ್ಲಿಸಿರುವ ಅರ್ಜಿ ವಿಲೇವಾರಿವರೆಗೂ ಸಿಎಟಿ ಆದೇಶ ಜಾರಿಗೆ ಒತ್ತಾಯಿಸದಂತೆ ವಿಕಾಸ್ ಕುಮಾರ್​ಗೆ ಸೂಚನೆ

Spread the loveಬೆಂಗಳೂರು: ಆರ್​​ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪ ಎಸಗಿದ್ದ ಆರೋಪದಡಿ ಕೆಲವು ಅಧಿಕಾರಿಗಳನ್ನು ಅಮಾನತು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ