Breaking News

ಹಂಪಿ ಎಕ್ಸ್‌ಪ್ರೆಸ್‌ ರೈಲಿನ ಗಾಲಿಗಳಲ್ಲಿ ಬೆಂಕಿ

Spread the love

ಬಳ್ಳಾರಿ: ನಿನ್ನೆ ರಾತ್ರಿ ಹಂಪಿ ಎಕ್ಸ್ ಪ್ರೆಸ್ ರೈಲಿನ ಗಾಲಿಗಳಲ್ಲಿ ಬೆಂಕಿ ಕಾಣಿಸಿಕೊಂಡಿರುವ ಘಟನೆ ಬಳ್ಳಾರಿ ಜಿಲ್ಲೆಯ ತೋರಣಗಲ್ ಬಳಿ ನಡೆದಿದೆ.

ಹೌದು, ತಾಂತ್ರಿಕ ದೋಷದಿಂದ ಹಂಪಿ ಎಕ್ಸ್‌ಪ್ರೆಸ್‌ ರೈಲಿನ ಗಾಲಿಗಳಲ್ಲಿ ಬೆಂಕಿ ಕಾಣಿಸಿಕೊಂಡಿದೆ.

ನಿನ್ನೆ ರಾತ್ರಿ ರೈಲಿನ ಎಂಜಿನ್ ಸ್ಟಾರ್ಟ್ ಮಾಡಿದ ಕೆಲವೇ ಕ್ಷಣಗಳಲ್ಲಿ ಹಿಂದಿನ ಗಾಲಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ.

ಆ ಬಳಿಕ ಬೆಂಕಿ ಹೊತ್ತಿಕೊಂಡಿರುವುದನ್ನು ಗಮನಿಸಿದ ರೈಲ್ವೆ ಸಿಬ್ಬಂದಿ, ಆ ದೋಷವನ್ನು ಸರಿಪಡಿಸಿದ್ದಾರೆ. ನಂತರ ರೈಲು ಸಂಚಾರ ಆರಂಭಿಸಲಾಗಿದೆ.

ಈ ರೈಲು ಹುಬ್ಬಳ್ಳಿಯಿಂದ ಮೈಸೂರಿಗೆ ತೆರಳುತ್ತಿತ್ತು. ರೈಲುಗಳ ಗಾಲಿಗಳಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮವಾಗಿ ಹಂಪಿ ಎಕ್ಸಪ್ರೇಸ್ ರೈಲು‌ 2 ಗಂಟೆ ತಡವಾಗಿ ನಿರ್ಗಮಿಸಿದೆ.


Spread the love

About Laxminews 24x7

Check Also

ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿಯನ್ನು ಕೊಲೆಗೈದು ಪರಾರಿಯಾಗಿದ್ದ ಬಾಲಕ ಕೊನೆಗೂ ಅರೆಸ್ಟ್‌

Spread the loveಬಳ್ಳಾರಿ: ಖಾಸಗಿ ಶಾಲಾ ಹಾಸ್ಟೆಲ್‌ನಲ್ಲಿ ಹಲ್ಲೆ ಮಾಡಿ ನಾಪತ್ತೆಯಾಗಿದ್ದ ಬಾಲಕನನ್ನು ಪೊಲೀಸರು  ಕೊನೆಗೂ ಪತ್ತೆ ಹಚ್ಚಿದ್ದಾರೆ. ಮೊನ್ನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ