ಬೆಳಗಾವಿ: ತೋಟಗಾರಿಕೆ ಇಲಾಖೆಯ ಅಧಿಕಾರಿ ರಾಜಕುಮಾರ ಟಾಕಳೆ ಮತ್ತು ಸಾಮಾಜಿಕ ಕಾರ್ಯಕರ್ತೆ ನವ್ಯಾಶ್ರೀ ಪರಸ್ಪರ ಆರೋಪ-ಪ್ರತ್ಯಾರೋಪ ಮಾಡುತ್ತಿದ್ದಾರೆ. ನವ್ಯಾಶ್ರೀ ಬೆದರಿಕೆ ಹಾಕುತ್ತಿದ್ದಾರೆ ಎಂದು ಅಧಿಕಾರಿ ರಾಜಕುಮಾರ ಟಾಕಳೆ ದೂರು ನೀಡಿದ್ರೆ, ಇತ್ತ ರಾಜಕುಮಾರ ಅವರೇ ನನ್ನ ಗಂಡ ಎಂದು ನವ್ಯಾಶ್ರೀ ಹೇಳುತ್ತಿದ್ದಾರೆ.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ನವ್ಯಾಶ್ರೀ, ರಾಜಕುಮಾರ ಟಾಕಳೆ ನನ್ನ ಗಂಡ, ಅವನಿಂದ ನನಗೆ ಏನು ಮೋಸ ಆಗಿದೆ ಅನ್ನೋದನ್ನ ಮುಂದಿನ ದಿನಗಳಲ್ಲಿ ಹೇಳುತ್ತೇನೆ ಎಂದು ಸಾಮಾಜಿಕ ಕಾರ್ಯಕರ್ತೆ ನವ್ಯಶ್ರೀ ಹೇಳಿದರು. ನಾನು 15 ದಿನಗಳಿಂದ ಭಾರತದಲ್ಲಿ ಇರಲಿಲ್ಲ. ಸಾಮಾಜಿಕ ಜಾಲತಾಣದಲ್ಲಿ ನನ್ನ ಫೋಟೋ, ವಿಡಿಯೋ ವೈರಲ್ ಆಗಿರುವುದು ಗೊತ್ತಾಗಿದೆ. ಈ ಬಗ್ಗೆ ನಾನು ಬೆಳಗಾವಿ ಪೊಲೀಸ್ ಕಮಿಷನರ್ ಭೇಟಿಯಾಗಿ ದೂರು ಕೊಡುತ್ತೇನೆ ಎಂದರು.
ನನ್ನ ಮೇಲೆ ಎಫ್ಐಆರ್ ದಾಖಲಾಗಿರುವ ಬಗ್ಗೆ ಮಾಹಿತಿಯಿಲ್ಲ. ಈವರೆಗೂ ಯಾವುದೇ ಪೊಲೀಸರು ನನಗೆ ಫೋನ್ ಮಾಡಿಲ್ಲ. ಎಫ್ಐಆರ್ ಕಾಪಿ ಪಡೆದು ಮಾತಾಡುತ್ತೇನೆ. ರಾಜಕುಮಾರ ಟಾಕಳೆ ನನ್ನ ಗಂಡ. ಅವನಿಂದ ನನಗೆ ಏನು ಮೋಸ ಆಗಿದೆ. ಅನ್ನೋದನ್ನ ಮುಂದಿನ ದಿನಗಳಲ್ಲಿ ಹೇಳುತ್ತೇನೆ. ನಾನು ಯಾವ ರೀತಿ ಮದುವೆ ಆಗಿದ್ದೇನೆ ಅನ್ನೋದನ್ನು ದಾಖಲೆ ಸಮೇತ ಬರುತ್ತೇನೆ ಎಂದು ನವ್ಯಾಶ್ರೀ ತಿಳಿಸಿದರು.