Breaking News

ರಸ್ತೆ ಅಪಘಾತದಲ್ಲಿ ಚಿಕ್ಕೋಡಿಯ ಯೋಧ ಸಾವು

Spread the love

ಚಿಕ್ಕೋಡಿ: ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಯಡೂರವಾಡಿ ಗ್ರಾಮದ ಬಿಎಸ್‌ಎಫ್ ಯೋಧ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ನಡೆದಿದೆ.

ಅಟೋದಿಂದ ಕೆಳಗಿಳಿಯುತ್ತಿದ್ದಾಗ ಲಾರಿಯೊಂದು ಢಿಕ್ಕಿ ಹೊಡೆದ ಪರಿಣಾಮವಾಗಿ ಯೋಧ ಪಶ್ಚಿಮ ಬಂಗಾಳ ರಾಜ್ಯದ ಪಂಜಿ ಪಾಡಾ ಎಂಬಲ್ಲಿ ರಸ್ತೆ ಅಪಘಾತದಲ್ಲಿ ನಿಧನವಾಗಿದ್ದಾರೆ.

 

ಸೂರಜ ಧೋಂಡಿರಾಮ ಸುತಾರ (30) ಸಾವನ್ನಪ್ಪಿದ ಯುವಕ. ಇತನು ಪಶ್ಚಿಮ ಬಂಗಾಳದಲ್ಲಿ ಗಡಿಭದ್ರತಾ ಪಡೆಯಲ್ಲಿ ಪೊಲೀಸ್ ಪೇದೆ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಸೋಮವಾರ ಬೆಳಗ್ಗೆ ಪತ್ನಿಯೊಂದಿಗೆ ಸೇವಾ ಸ್ಥಳಕ್ಕೆ ಹೋಗುತ್ತಿದ್ದಾಗ ಅಟೋದಿಂದ ಕೆಳಗಿಳಿಯುತ್ತಿದ್ದಾಗ ಎದುರಿನಿಂದ ಬಂದ ಲಾರಿ ಡಿಕ್ಕಿ ಹೊಡೆದಿದೆ.ಡಿಕ್ಕಿಯ ರಭಸಕ್ಕೆ ಯೋಧ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ.

ಚಿಕ್ಕೋಡಿ ತಾಲೂಕಿನ ಯಡೂರವಾಡಿ ಗ್ರಾಮದಲ್ಲಿ ಪ್ರಾಥಮಿಕ ಮತ್ತು ಫ್ರೌಢ ಶಿಕ್ಷಣವನ್ನು ಮುಗಿಸಿದ್ದರು. 2012 ರಲ್ಲಿ ಭಾರತೀಯ ಬಿಎಸ್‌ಎಫ್ ಸೇನೆಗೆ ಸೇರ್ಪಡೆಗೊಂಡಿದ್ದರು.ಮೃತ ಯೋಧ ಸೂರಜ ಇವರು ತಂದೆ,ಪತ್ನಿ,ಮೂರು ವರ್ಷದ ಮಗಳು,ಓರ್ವ ಸಹೋದರನ್ನು ಬಿಟ್ಟು ಅಗಲಿದ್ದಾರೆ. ಮಂಗಳವಾರ ಬೆಳಗ್ಗೆ ಸಾವಿನ ಸುದ್ದಿ ತಿಳಿಯುತ್ತಿದಂತೆ ಯಡೂರವಾಡಿ ಗ್ರಾಮದಲ್ಲಿ ನೀರವಮೌನ ಆವರಿಸಿತ್ತು.ಅವರ ಪಾರ್ಥಿವ ಶರೀರ ಬುಧವಾರ ಬೆಳಗ್ಗೆ ದೆಹಲಿಯ ಮೂಲಕ ಸಾಂಬ್ರಾ ವಿಮಾನ ನಿಲ್ದಾಣ ತಲುಪಲಿದೆ.ಬಳಿಕ ಯಡೂರವಾಡಿ ಗ್ರಾಮದಲ್ಲಿ ಅಂತ್ಯಸಂಸ್ಕಾರ ನಡೆಯಲಿದೆ.


Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ