Breaking News

ಅಂಗನವಾಡಿ ಕಾರ್ಯಕರ್ತೆಯರ ಬಹುದಿನದ ಬೇಡಿಕೆಗೆ ಸಿಗಲಿದೆ ಗ್ರೀನ್ ಸಿಗ್ನಲ್!?

Spread the love

ಬೆಂಗಳೂರು (ಜು.19): ಅಂಗನವಾಡಿ ಕಾರ್ಯಕರ್ತೆಯರ (Anganwadi Workers) ಬಹುದಿನದ ಕನಸು ನನಸಾಗುವ ಸಾಧ್ಯತೆ ಇದೆ. ಅಂಗನವಾಡಿ ಕಾರ್ಯಕರ್ತರನ್ನು ಶಿಕ್ಷಕಿಯರೆಂದು (Teacher) ಪರಿಗಣಿಸಲು ರಾಷ್ಟ್ರೀಯ ಶಿಕ್ಷಣ ನೀತಿಯ ಶಿಫಾರಸ್ಸು ಮಾಡಿದೆ. ಒಂದು ವೇಳೆ ಈ ಶಿಫಾರಸ್ಸಿಗೆ ಅನುಮೋದನೆ ಸಿಕ್ಕಿದ್ದೇ ಆದಲ್ಲಿ ಗೌರವ ಧನ, ವೇತನವಾಗಿ (Salary) ಪರಿವರ್ತನೆಯಾಗಲಿದ್ದು ಅದರ ಜೊತೆಗೆ ಸೇವಾ ಭದ್ರತೆ ಕೂಡ ದೊರೆಯಲಿದೆ. ಅಂಗನವಾಡಿಗಳ ಜೊತೆಗೆ ಒಂದು ಮತ್ತು ಎರಡನೇ ತರಗತಿಗಳನ್ನು ಸಂಯೋಜಿಸಿ ಶಾಲೆಗಳ (Combined Schools) ಸ್ವರೂಪವನ್ನು ಬದಲಾವಣೆ ಮಾಡಲು ಸಹ ಪ್ಲಾನ್ ಮಾಡಲಾಗುತ್ತಿದೆ. 

ಅಂಗನವಾಡಿ ಕಾರ್ಯಕರ್ತೆಯರು ಅಂದ್ರೆ ಆದೇಕೊ ಸರ್ಕಾರಕ್ಕೆ ತಾತ್ಸಾರ ಎಂಬ ಮಾತು ಎಲ್ಲೆಡೆಯಿಂದ ಕೇಳಿಬರ್ತಿತ್ತು. ಇದಕ್ಕೆ ಪುಷ್ಠಿ ಎಂಬಂತೆ ಅಂಗನವಾಡಿ ಕಾರ್ಯಕರ್ತೆಯರು ತಮ್ಮ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಬೆಂಗಳೂರಿನ ಫ್ರೀಡಂಪಾರ್ಕ್ ನಲ್ಲಿ ವಾರಾನುಗಟ್ಟಲೆ ಎಷ್ಟೇ ಪ್ರತಿಭಟನೆ ಮಾಡಿದರೂ ಸರ್ಕಾರಗಳು ಕ್ಯಾರೇ ಎನ್ನುತ್ತಿರಲಿಲ್ಲ. ಆದರೀಗ ಸಮಯ ಬದಲಾಗಿದೆ. ಈ ಕಾರ್ಯಕರ್ತೆಯರ ಬಹುದಿನದ ಬೇಡಿಕೆಗೆ ಸರ್ಕಾರ ಅಸ್ತು ಎನ್ನುವ ಸಮಯ ಬಂದಾಗಿದೆ.

3 ರಿಂದ 6 ವರ್ಷದೊಳಗಿನ ಮಕ್ಕಳಿಗೆ ಶಿಕ್ಷಣ

ಅಂಗನವಾಡಿ ಕಾರ್ಯಕರ್ತೆಯರನ್ನು ಶಿಕ್ಷಕಿಯರೆಂದು ಪರಿಗಣಿಸಲು ರಾಷ್ಟ್ರೀಯ ಶಿಕ್ಷಣ ನೀತಿ ಶಿಫಾರಸ್ಸು ಮಾಡಿದೆ. ಇದನ್ನು ಅನುಷ್ಟಾನಗೊಳಿಸಲು ಸರ್ಕಾರ ನಿರ್ಧರಿಸಿದೆ. ಅಂಗನವಾಡಿ ಕಾರ್ಯಕರ್ತರು ಈವರೆಗೆ 3 ರಿಂದ 6 ವರ್ಷದೊಳಗಿನ ಮಕ್ಕಳಿಗೆ ಶಿಕ್ಷಣ ನೀಡ್ತಿದ್ದರು. ಹಾಗೂ ಬಾಣಂತಿಯರು, ಗರ್ಭಿಣಿಯರ ಆರೋಗ್ಯದ ಮೇಲೆ ನಿಗಾ ಇರಿಸಲು, ಪೌಷ್ಟಿಕ ಆಹಾರ ವಿತರಣೆ ಸೇರಿದಂತೆ ಸರ್ಕಾರದ ಹಲವು ಯೋಜನೆಗಳ ಅನುಷ್ಠಾನಕ್ಕಾಗಿ ಬಳಸಿಕೊಳ್ಳಲಾಗುತ್ತಿತ್ತು. ಆದರೀಗ ಇವರನ್ನು ಶಿಕ್ಷಕರೆಂದು ಪರಿಗಣಿಸುವಂತೆ NEP ಶಿಫಾರಸ್ಸು ಮಾಡಿದೆ.


Spread the love

About Laxminews 24x7

Check Also

ಗೋಲಿಹಳ್ಳಿಯ ಶ್ರೀ ಶಿವ ಮಂದಿರದಲ್ಲಿ ನೂತನ ಶಿವ ಮುಖವಾಡ ಮತ್ತು ನಂದಿ ಮೂರ್ತಿ ಪ್ರತಿಷ್ಠಾಪನೆ

Spread the love ಗೋಲಿಹಳ್ಳಿಯ ಶ್ರೀ ಶಿವ ಮಂದಿರದಲ್ಲಿ ನೂತನ ಶಿವ ಮುಖವಾಡ ಮತ್ತು ನಂದಿ ಮೂರ್ತಿ ಪ್ರತಿಷ್ಠಾಪನೆ ಖಾನಾಪೂರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ