ಅಕ್ರಮವಾಗಿ ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಸಾಗಿಸುತ್ತಿದ್ದ ಗಾಡಿಯನ್ನು ಸೀಜ್ ಮಾಡಿ ಅಪಾರ ಪ್ರಮಾಣದ ಅಕ್ಕಿಯನ್ನು ನೇಸರಗಿ ಪೊಲೀಸರು ಜಪ್ತಿ ಮಾಡಿದ್ದಾರೆ.
ಹೌದು ಬೊಲೆರೋ ಪಿಕ್‍ಅಪ್ ವಾಹನದಲ್ಲಿ ಅಕ್ರಮವಾಗಿ ರೇಶನ್ ಅಕ್ಕಿಯನ್ನು ಸಾಗಿಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ನೇಸರಗಿ ಪೊಲೀಸರು ಮತ್ತು ಆಹಾರ ಇಲಾಖೆ ಅಧಿಕಾರಿಗಳು ವಾಹನ ಸಮೇತ ಅಕ್ಕಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
76,076 ರೂಪಾಯಿ ಮೌಲ್ಯದ 71 ಚೀಲ ಅಕ್ಕಿಯನ್ನು ವಶಕ್ಕೆ ಪಡೆಯಲಾಗಿದೆ. ಚಾಲಕನನ್ನು ವಶಕ್ಕೆ ಪಡೆದುಕೊಂಡಿರುವ ಪೊಲೀಸರು ಮುಂದಿನ ವಿಚಾರಣೆ ಕೈಗೊಂಡಿದ್ದಾರೆ. ಈ ದಾಳಿಯಲ್ಲಿ ಸಿಪಿಐ ಕಲ್ಯಾಣಶೆಟ್ಟಿ ನೇತೃತ್ವದ ತಂಡ ಭಾಗಿಯಾಗಿತ್ತು. ನೇಸರಗಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.