Breaking News
Home / ಜಿಲ್ಲೆ / ಚಿತ್ರದುರ್ಗ / ರಾಜ್ಯದ ಇತಿಹಾಸದಲ್ಲೇ ಫಸ್ಟ್- 4 ಕೋಟಿ ಮೌಲ್ಯದ ಹಸಿ ಗಾಂಜಾ ಬೇಟೆ

ರಾಜ್ಯದ ಇತಿಹಾಸದಲ್ಲೇ ಫಸ್ಟ್- 4 ಕೋಟಿ ಮೌಲ್ಯದ ಹಸಿ ಗಾಂಜಾ ಬೇಟೆ

Spread the love

ಚಿತ್ರದುರ್ಗ: ರಾಜ್ಯದಾದ್ಯಂತ ಪೊಲೀಸರು ಡ್ರಗ್ಸ್ ಮಾಫಿಯಾ ವಿರುದ್ಧ ಸಮರ ಸಾರಿದ್ದು, ಪ್ರತಿದಿನ ಗಾಂಜಾವನ್ನು ವಶಕ್ಕೆ ಪಡೆದ ಪ್ರಕರಣಗಳು ಬೆಳಕಿಗೆ ಬರುತ್ತಿದೆ. ಸದ್ಯ ಕೋಟೆ ನಾಡು ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ರಾಂಪುರ ಠಾಣೆ ಪೊಲೀಸರು ಬರೋಬ್ಬರಿ ನಾಲ್ಕು ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ಗಾಂಜಾವನ್ನು ವಶಪಡಿಸಿಕೊಂಡು, ನಾಲ್ವರನ್ನು ಬಂಧಿಸಿದ್ದಾರೆ.

ಡಿ.ಬಿ.ಮಂಜುನಾಥ್, ವೈ.ಜಂಬುನಾಥ್, ಡಿ.ವೈ.ಮಂಜುನಾಥ್, ಸುಮಂತ್ ಗೌಡ ಬಂಧಿತ ಆರೋಪಿಗಳಿದ್ದಾರೆ. ಸೆ.3ರ ನಸುಕಿನ ಜಾವ ಬೀಟ್ ಹೊರಟ ಕೋಟೆನಾಡಿನ ಪೊಲೀಸ್ ಪೇದೆಗೆ ಒಂದು ಖಚಿತ ಮಾಹಿತಿ ಬಂದಿತ್ತು. ಈ ಮಾಹಿತಿ ಮೇರೆಗೆ ಮರುದಿನ ಬೆಳಗ್ಗೆಯೇ ಭರ್ಜರಿ ಶಿಕಾರಿಗೆ ಪೊಲೀಸರು ಅಖಾಡ ರೆಡಿ ಮಾಡಿ ರಾಜ್ಯದ ಇತಿಹಾಸದಲ್ಲೇ ಮೊದಲ ಬಾರಿಗೆ ಅತಿ ದೊಡ್ಡ ಗಾಂಜಾ ದಂಧೆಯನ್ನು ಬಯಲಿಗೆಳೆದಿದ್ದಾರೆ.

ಆಂಧ್ರ ಗಡಿಭಾಗದಲ್ಲಿ ಬಳ್ಳಾರಿಯಿಂದ ಬಂದಿದ್ದ ಆರೋಪಿಗಳು ವಡೇರಹಳ್ಳಿಯಲ್ಲಿ ಬರೋಬ್ಬರಿ 4 ಎಕರೆ 20 ಗುಂಟೆ ಜಮೀನಿನಲ್ಲಿ ಗಾಂಜಾ ಬೆಳೆದಿದ್ದರು. ಹೊಲದ ಮೇಲೆ ದಾಳಿ ಮಾಡಿದ ಪೊಲೀಸರು ನಾಲ್ವರು ಆರೋಪಿಗಳನ್ನು ಸೆ.4 ರಂದು ವಶಕ್ಕೆ ಪಡೆದು ತನಿಖೆ ಮುಂದುವರಿಸಿದ್ದಾರೆ. ಪೊಲೀಸರು ದಾಳಿ ಮಾಡಿದ ಜಮೀನಿನಲ್ಲಿ ಬರೋಬ್ಬರಿ 9,871 ಕೆ.ಜಿ ತೂಕದ ಗಾಂಜಾ ಪತ್ತೆಯಾಗಿದೆ. ಈ ದಿಸೆಯಲ್ಲಿ ನೋಡಿರೆ ರಾಜ್ಯದ ಅತಿದೊಡ್ಡ ಗಾಂಜಾ ಪ್ರಕರಣ ಚಿತ್ರದುರ್ಗ ಜಿಲ್ಲೆಯಲ್ಲಿ ದಾಖಲಾದಂತಾಗಿದೆ. ಅಲ್ಲದೇ ಜಿಲ್ಲೆಯಲ್ಲಿ ನಡೆದಿದ್ದ ಗಾಂಜಾ ವಹಿವಾಟಿನಲ್ಲಿ ವಿದ್ಯಾರ್ಥಿಗಳು ಕೂಡ ಅಮಲೇರಿಸಿಕೊಳ್ತಿದ್ದ ಶಾಕಿಂಗ್ ವಿಚಾರ ಬೆಳಕಿಗೆ ಬಂದಿದೆ.


Spread the love

About Laxminews 24x7

Check Also

ಬಜೆಟ್​ ವಿಚಾರದಲ್ಲಿ ಭಾರೀ ಟ್ರೋಲ್​ ಆದ ಪ್ರಭಾಸ್​ ನಟನೆಯ ಸಲಾರ್​ ಸಿನಿಮಾ

Spread the loveಪ್ರಭಾಸ್​ ನಟನೆಯ ಸಲಾರ್​ ಸಿನಿಮಾ 2022ರ ಏಪ್ರಿಲ್​ 14ರಂದು ತೆರೆಗೆ ಬರುತ್ತಿದೆ. ಪ್ರಭಾಸ ಸಿನಿಮಾ ಕೆರಿಯರ್​ನಲ್ಲಿ ಚಿತ್ರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ