Breaking News

ದಿಗಳ ದಿನಗೂಲಿ ಹೆಚ್ಚಳ ಮಾಡಿಲ್ಲ; ಗೃಹ ಸಚಿವ ಆರಗ ಜ್ಞಾನೇಂದ್ರ

Spread the love

ಬೆಂಗಳೂರು: ಜೈಲಿನಲ್ಲಿರುವ ಕೈದಿಗಳಿಗೆ ದಿನಗೂಲಿ ಏರಿಕೆ ಮಾಡಿದ್ದಾರೆ ಎಂಬ ವಿಷಯದ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಕೆಲವರು ಮನಬಂದಂತೆ ವ್ಯಂಗ್ಯ ಚಿತ್ರಣ, ಮೀಮ್ ಮಾಡುವುದು, ಬರಹಗಳನ್ನು ಹಾಕಿದ್ದಾರೆ. ಕೈದಿಗಳ ದಿನಗೂಲಿಯನ್ನ 525 ರೂ.ಗಳಿಗೆ ಏರಿಸಿದ್ದು ಬೇರೆ ಉದ್ಯೋಗಗಳಿಗಿಂತ ಜೈಲುವಾಸವೇ ಲಾಭದಾಯಕ ಎಂಬಂತೆ ಹಲವರು ಗೇಲಿ ಮಾಡಿ ಹರಿಬಿಟ್ಟಿರುವುದು ಕಂಡುಬಂದಿದೆ.

ಈ ವಿಷಯದ ಬಗ್ಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಸ್ಪಷ್ಟೀಕರಣ ನೀಡಿದ್ದು, ರಾಜ್ಯದಲ್ಲಿ ಸುಮಾರು ಹದಿನೈದು ಸಾವಿರ ಕೈದಿಗಳು ಜೈಲುವಾಸ ಅನುಭವಿಸುತ್ತಿದ್ದಾರೆ. ಜೈಲುವಾಸದಲ್ಲಿರುವ ಕೈದಿಗಳಿಗೆ ಕೂಲಿ ಹಣವನ್ನು 200 ರೂ.ಗಳಿಂದ ಸ್ವಲ್ಪ ಹೆಚ್ಚಿಗೆ ಮಾಡುವ ಕುರಿತು ಪ್ರಸ್ತಾವನೆ ಮಾಡಲಾಗಿದೆಯೇ ಹೊರತೂ ಅಂತಹ ಆದೇಶ ಇದುವರೆಗೂ ಹೊರಡಿಸಿಲ್ಲ ಎಂದು ಸ್ಪಷ್ಟೀಕರಣ ನೀಡಿದ್ದಾರೆ.


Spread the love

About Laxminews 24x7

Check Also

ಹುಬ್ಬಳ್ಳಿ, ಬೆಳಗಾವಿ ವಿಮಾನ ನಿಲ್ದಾಣವನ್ನೂ ಅಂತಾರಾಷ್ಟ್ರೀಯ ನಿಲ್ದಾಣವಾಗಿ ಘೋಷಿಸಿ: ಎಂ.ಬಿ ಪಾಟೀಲ್

Spread the loveಬೆಂಗಳೂರು: ತಮಿಳುನಾಡಿನ ಮಧುರೈ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ನಿಲ್ದಾಣವಾಗಿ ಘೋಷಿಸಿರುವ ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರ್ಕಾರವು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ