Breaking News
Home / ಜಿಲ್ಲೆ / ಬೆಂಗಳೂರು / ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಈಶ್ವರಪ್ಪಗೆ ಕ್ಲೀನ್ ಚಿಟ್; ದುರ್ದೈವದ ಸಂಗತಿ :ಕಾಂಗ್ರೆಸ್

ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಈಶ್ವರಪ್ಪಗೆ ಕ್ಲೀನ್ ಚಿಟ್; ದುರ್ದೈವದ ಸಂಗತಿ :ಕಾಂಗ್ರೆಸ್

Spread the love

ಬೆಂಗಳೂರು: ರಾಜ್ಯದಲ್ಲಿ ಭಾರೀ ಸದ್ದು ಮಾಡಿದ್ದ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದ ಪ್ರಮುಖ ಆರೋಪಿ ಮಾಜಿ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಅವರಿಗೆ ಕ್ಲೀನ್ ಚಿಟ್ ನೀಡಲಾಗಿದ್ದು, ಇದಕ್ಕೆ ಕಾಂಗ್ರೆಸ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.

ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದ ಅಂತಿಮ ವರದಿಯನ್ನು ಉಡುಪಿ ಪೊಲೀಸರು ಬುಧವಾರ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ. ಪ್ರಕರಣದಲ್ಲಿ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪಗೆ ಕ್ಲೀನ್ ಚಿಟ್ ನೀಡಲಾಗಿದೆ. ಆತ್ಮಹತ್ಯೆ ಮಾಡಿಕೊಳ್ಳಲು ಪ್ರಚೋದಿಸಿದ್ದಕ್ಕೆ ಸಾಕ್ಷ್ಯಗಳೇ ಇಲ್ಲ ಎಂದು ಅಂತಿಮ ವರದಿಯಲ್ಲಿ ಉಡುಪಿ ಪೊಲೀಸರು ಲ್ಲೇಖಿಸಿದ್ದಾರೆ.

ಪ್ರಕರಣದಲ್ಲಿ ಈಶ್ವರಪ್ಪ ಅವರನ್ನು ಕರೆದು ವಿಚಾರಣೆಯನ್ನೂ ನಡೆಸಿಲ್ಲ. ಆದರೂ ಆತ್ಮಹತ್ಯೆಗೆ ಕುಮ್ಮಕ್ಕು ಎಂಬುದಕ್ಕೆ ಸಾಕ್ಷ್ಯಾಧಾರಗಳೇ ಇಲ್ಲ ಎಂದು ತನಿಖೆ ನಡೆಸಿರುವ ಉಡುಪಿ ಪೊಲೀಸರು ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸಿದ್ದಾರೆ.

 

ಈ ಬಗ್ಗೆ ಪ್ರತಿಕ್ರಿಯಿಸಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಅವರು, ಈಶ್ವರಪ್ಪ ಕೇಸ್ ಕ್ಲೋಸ್ ಮಾಡಿದ್ದಾರೆ. ಇದೊಂದು ದುರ್ದೈವದ ಸಂಗತಿ. ಮಾಜಿ ಸಚಿವರ ವಿರುದ್ಧ ಸಂತೋಷ್ ಪಾಟೀಲ್‌ ನೇರ ಆರೋಪ ಮಾಡಿದ್ದರು. ಸಾವಿಗೆ ಕಾರಣ ಈಶ್ವರಪ್ಪ ಅಂತ ಹೇಳಿದ್ದರು. ಅದರೆ ಬಿ-ರಿಪೋರ್ಟ್ ಹಾಕಿ‌ ಕೇಸ್ ಕ್ಲೋಸ್ ಮಾಡಿದ್ದಾರೆ. ಸರ್ಕಾರ ಸಂಪೂರ್ಣ ವಿಫಲವಾಗಿದೆ. ಲಾ ಡಿಪಾರ್ಟ್ ಮೆಂಟ್ ಪೇಲ್ಯೂರ್ ಆಗಿದೆ ಎಂದರು.

ಸಂತೋಷ್ ಪಾಟೀಲ್ ಬಿಜೆಪಿ ಕಾರ್ಯಕರ್ತ. ಅವರ ಪತ್ನಿಯೇ ನ್ಯಾಯ ಸಿಗಲ್ಲ ಅಂತ ರಾಜ್ಯಪಾಲರಿಗೆ ಪತ್ರವನ್ನು ಬರೆದಿದ್ದರು. ಬಹುಶಃ ಈಶ್ವರಪ್ಪ ಅವರು ಸಿಎಂ ಬಸವರಾಜ ಬೊಮ್ಮಾಯಿಯವರನ್ನ ಹೆದರಿಸಿರಬಹುದು. ಅದಕ್ಕೆ ಹೆದರಿ ಅಧಿಕಾರಿಗಳ ಮೂಲಕ ಕೇಸ್ ಮುಚ್ಚಿಸಿರಬಹುದು. ಅವರ ಕುಟುಂಬದ ದುಃಖ ಇನ್ನೂ‌ ಮರೆಯಾಗಿಲ್ಲ. ಅಷ್ಟರೊಳಗೆ ಬಿ ರಿಪೋರ್ಟ್ ಹಾಕಿದ್ದಾರೆ. ಸರ್ಕಾರವೇ ಇದರಲ್ಲಿ ಶಾಮೀಲಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಆರೋಪಿಸಿದ್ದಾರೆ.


Spread the love

About Laxminews 24x7

Check Also

40 ಅಡಿ ಆಳದ ಬಾವಿಗೆ ಬಿದ್ದ ಬೆಕ್ಕನ್ನು ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ

Spread the love ಚಿಕ್ಕೋಡಿ: ನೀರಿಲ್ಲದ 40 ಅಡಿ ಆಳದ ಬಾವಿಗೆ ಬಿದ್ದ ಬೆಕ್ಕನ್ನು ಚಿಕ್ಕೋಡಿ ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಿಸಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ