ಸಂಕೇಶ್ವರ : ಟಿಪ್ಪರ್ ವಾಹನವೊಂದು ಹಾಯ್ದು 50ಕ್ಕೂ ಅಧಿಕ ಕುರಿಗಳು ದಾರುಣವಾಗಿ ಮೃತಪಟ್ಟಿರುವ ಘಟನೆ ಹುಕ್ಕೇರಿ ತಾಲೂಕಿನ ಅಮ್ಮಣಗಿ ಗ್ರಾಮದ ಹೊರವಲಯದಲ್ಲಿ ನಡೆದಿದೆ.
ಟಿಪ್ಪರ್ ವಾಹನ ಚಾಲಕನ ನಿಯಂತ್ರಣ ತಪ್ಪಿ ಕುರಿಗಳ ಮೇಲೆ ಹಾಯ್ದು ವಾಹನ ಪಲ್ಟಿಯಾಗಿದೆ ಘಟನೆ ನಡೆಯುತ್ತಿದ್ದಂತೆ ಟಿಪ್ಪರ್ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ.
ಅಮ್ಮಣಗಿ ಗ್ರಾಮದ ಕುರಿಗಾಯಿ ಹಾಲಪ್ಪ ಸಿದ್ದಪ್ಪ ಹೆಗಡೆ ಎಂಬುವವರಿಗೆ ಸೇರಿದ ಕುರಿಗಳು ಇದಾಗಿವೆ. ಘಟನಾ ಸ್ಥಳಕ್ಕೆ ಸಂಕೇಶ್ವದ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.