Breaking News

ರಕ್ಷಣೆ ಕೇಳಲು ಬಂದ ಸಲ್ಮಾನ್ ಖಾನ್ ಸೆಲ್ಫಿ ಕ್ಲಿಕ್ಕಿಸಲು ಮುಗಿಬಿದ್ದ ಮುಂಬೈ ಪೊಲೀಸ್..!

Spread the love

ಶುಕ್ರವಾರದಂದು ಖ್ಯಾತ ಬಾಲಿವುಡ್ ನಟ ಸಲ್ಮಾನ್ ಖಾನ್ ಮುಂಬೈ ಪೊಲೀಸ್ ಕಮೀಷನರ್ ವಿವೇಕ್ ಪಾನ್ಸಲ್ಕರ್ ಅವರನ್ನು ಭೇಟಿ ಮಾಡಿದ್ದರು. ಸಂಜೆ 4:00 ಸುಮಾರಿಗೆ ಕ್ರಾಫರ್ಡ್ ಮಾರ್ಕೆಟ್ ಎದುರಿಗಿರುವ ಮುಂಬೈ ಪೊಲೀಸ್ ಮುಖ್ಯ ಕಚೇರಿಗೆ ಆಗಮಿಸಿದ್ದ ಅವರು ಬಳಿಕ ಪೊಲೀಸ್ ಕಮಿಷನರ್ ಅವರನ್ನು ಭೇಟಿಯಾಗಿದ್ದಾರೆ.

 

ತಮ್ಮ ಈ ಭೇಟಿ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಲ್ಮಾನ್ ಖಾನ್, ಇದೊಂದು ಸೌಜನ್ಯದ ಭೇಟಿ ಇದರಲ್ಲಿ ಯಾವುದೇ ವಿಶೇಷವಿಲ್ಲ ಎಂದು ಹೇಳಿದ್ದಾರೆ. ಆದರೆ ಮೂಲಗಳ ಪ್ರಕಾರ ಲಾರೆನ್ಸ್ ಬಿಷ್ಣೊಯ್ ಗ್ಯಾಂಗ್ ನಿಂದ ಜೀವ ಬೆದರಿಕೆ ಎದುರಿಸುತ್ತಿರುವ ಸಲ್ಮಾನ್ ಈ ಹಿನ್ನೆಲೆಯಲ್ಲಿ ಕಮೀಷನರ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ ಎಂದು ಹೇಳಲಾಗಿದೆ.

ಇದೇ ವೇಳೆ ಸಹಾಯಕ ಕಮಿಷನರ್ ವಿಶ್ವಾಸ್ ನಾಂಗ್ರೆ ಪಾಟೀಲ್ ಅವರನ್ನೂ ಸಲ್ಮಾನ್ ಖಾನ್ ಭೇಟಿಯಾಗಿದ್ದಾರೆ. ಈ ಭೇಟಿ ಬಳಿಕ ಅವರು ಹೊರಬಂದ ವೇಳೆ ಸಲ್ಮಾನ್ ಖಾನ್ ಜೊತೆ ಸೆಲ್ಫಿ ತೆಗೆಸಿಕೊಳ್ಳಲು ಪೊಲೀಸ್ ಸಿಬ್ಬಂದಿ ಮುಗಿಬಿದ್ದಿದ್ದಾರೆ. ಈ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.


Spread the love

About Laxminews 24x7

Check Also

ಧರ್ಮಸ್ಥಳ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​​: ಅನಾಮಿಕನ ಮುಖವಾಡ ಕಳಚಿದ ಮಾಜಿ ಪತ್ನಿ

Spread the loveಮಂಡ್ಯ, (ಆಗಸ್ಟ್ 21): ನೂರಾರು ಶವ ಹೂತಿರುವುದಾಗಿ ಆರೋಪಿಸಿ ಧರ್ಮಸ್ಥಳ ಪ್ರಕರಣವನ್ನು (Dharmasthala Case) ರಾಷ್ಟ್ರಮಟ್ಟದಲ್ಲಿ ಸದ್ದು ಮಾಡಲು ಕಾರಣವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ