Breaking News

ಹೊನ್ನಾಳಿಯ ರೇಣುಕಾಚಾರ್ಯ ಮನೆಗೆ ಬಂದ ಯಡಿಯೂರಪ್ಪ; BSY ಕಂಡು ಕಣ್ಣೀರಾದ ಶಾಸಕ

Spread the love

ದಾವಣಗೆರೆ: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಇಂದು ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯ ಮನೆಗೆ ಭೇಟಿ ನೀಡಿದ್ದು, ಮಾಜಿ ಸಿಎಂ ಅವರನ್ನು ಕಂಡು ರೇಣುಕಾಚಾರ್ಯ ಭಾವುಕರಾಗಿ ಕಣ್ಣೀರಿಟ್ಟ ಘಟನೆ ನಡೆದಿದೆ.

ದಾವಣಗೆರೆ ಜಿಲ್ಲೆಯ ಹೊನ್ನಾಳಿಯ ಶಾಸಕ ಎಂ.ಪಿ.ರೇಣುಕಾಚಾರ್ಯ ಅವರ ಮನೆಗೆ ಭೇಟಿ ನೀಡಿದ ಮಾಜಿ ಸಿಎಂ ಯಡಿಯೂರಪ್ಪ, ಕೆಲ ಕಾಲ ಚರ್ಚೆ ನಡೆಸಿದರು.

ಈ ವೇಳೆ ಯಡಿಯೂರಪ್ಪನವರ ಆಡಳಿತ ವೈಖರಿ ನೆನೆದು ರೇಣುಕಾಚಾರ್ಯ ಭಾವುಕರಾದರು.

ಯಡಿಯೂರಪ್ಪ ಚುನಾವಣೆಯಲ್ಲಿ ಸ್ಪರ್ಧಿಸಲ್ಲ ಎಂದು ಹೇಳಿದ್ದಾರೆ. ಆದರೆ ಪಕ್ಷ ಸಂಘಟನೆ ಮಾಡಲ್ಲ ಎಂದಿಲ್ಲ. ಇದೊಂದು ಬಾರಿ ಅವರು ಚುನಾವಣೆಯಲ್ಲಿ ಸ್ಪರ್ಧಿಸಬೇಕು ಎಂಬುದು ಎಲ್ಲಾ ಶಾಸಕರ ಕೋರಿಕೆ. ಒಂದು ಬಾರಿ ಚುನಾವಣೆಯಲ್ಲಿ ಸ್ಪರ್ಧಿಸಿ ಎಂದು ಮನವಿ ಮಾಡಿದರು.

ಇದೇ ವೇಳೆ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ರೇಣುಕಾಚಾರ್ಯ, ಕಾಂಗ್ರೆಸ್ ನಲ್ಲಿ ಬಣ ರಾಜಕೀಯ ತಾರಕಕ್ಕೇರಿದೆ. ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಸಿಎಂ ಆಗುವ ಕನಸು ಕಾಣುತ್ತಿದ್ದಾರೆ. ಪಕ್ಷವೇ ಅಧಿಕಾರಕ್ಕೆ ಬರಲ್ಲ, ಇನ್ನು ಸಿಎಂ ಆಗಲು ಸಾಧ್ಯವೇ ಇಲ್ಲ ಎಂದು ಹೇಳಿದರು.


Spread the love

About Laxminews 24x7

Check Also

ಉಪಚುನಾವಣೆಯಲ್ಲಿ ಮೇಟಿ ಕುಟುಂಬದವರಿಗೆ ಟಿಕೆಟ್

Spread the loveಬೆಳಗಾವಿ: ‘ಕಾಂಗ್ರೆಸ್ ಶಾಸಕ ಎಚ್‌.ವೈ. ಮೇಟಿ ನಿಧನದಿಂದ ತೆರವಾಗಿರುವ ಬಾಗಲಕೋಟೆ ವಿಧಾನಸಭೆ ಕ್ಷೇತ್ರದ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಕಾಂಗ್ರೆಸ್‌ನಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ