Breaking News

ಪುಷ್ಪ ಚಿತ್ರದ ತಂತ್ರ ಬಳಸಿ ಗಾಂಜಾ ಮಾರಾಟ: ದ.ಕನ್ನಡದ ಇಬ್ಬರು ಸೇರಿ ಏಳು ಜನರ ಬಂಧನ

Spread the love

ಬೆಂಗಳೂರು: ಇತ್ತೀಚೆಗೆ ಬಿಡುಗಡೆಯಾಗಿ ಯಶಸ್ಸು ಕಂಡ ತೆಲುಗಿನ “ಪುಷ್ಪಾ’ ಸಿನಿಮಾದಿಂದ ಪ್ರೇರಣೆಯಿಂದ ಬುಲೆರೊ ಗೂಡ್ಸ್‌ ವಾಹನದ ಕೆಳಭಾಗದಲ್ಲಿ ಪ್ರತ್ಯೇಕ ಬಾಕ್ಸ್‌ ಮಾಡಿಕೊಂಡು ಬೀದರ್‌ನಿಂದ ಗಾಂಜಾ ತಂದು ನಗರದಲ್ಲಿ ಪೆಡ್ಲರ್‌ಗಳಿಗೆ ಮಾರಾಟ ಮಾಡುತ್ತಿದ್ದ ಬೃಹತ್‌ ಜಾಲವನ್ನು ಬೇಗೂರು ಪೊಲೀಸರು ಬೇಧಿಸಿದ್ದು, ಒಂದು ಕೋಟಿ ಮೌಲ್ಯದ 175 ಕೆ.ಜಿ.

ಗಾಂಜಾ ವಶಪಡಿಸಿಕೊಂಡಿದ್ದಾರೆ.

ಕುಣಿಗಲ್‌ ತಾಲೂಕಿನ ಕೆ.ಆರ್‌.ಅರವಿಂದ್‌(26), ತಾವರೆಕೆರೆ ನಿವಾಸಿ ಪವನ್‌ ಕುಮಾರ್‌ (27), ಮಂಗಳೂರಿನ ಅಮ್ಜದ್‌ ಇತಿ ಯಾರ್‌ ಅಲಿಯಾಸ್‌ ಇಮ್ರಾನ್‌ ಅಲಿಯಾಸ್‌ ಇರ್ಷಾದ್‌ (27) ಈ ಆರೋಪಿಗಳ ಮಾಹಿತಿ ಮೇರೆಗೆ ವಿಶೇಷ ಕಾರ್ಯಾಚರಣೆ ನಡೆಸಿ ಬೀದರ್‌ನ ಭಾಲ್ಕಿ ಪ್ರಭು(27), ದಕ್ಷಿಣ ಕನ್ನಡದ ನಜೀಮ್‌ (26) ಮತ್ತು ಆಂಧ್ರಪ್ರದೇಶದ ಭೂಪಾಲ ಪಟ್ಟಣಂನ ಪತ್ತಿ ಸಾಯಿ ಚಂದ್ರ ಪ್ರಕಾಶ್‌ (19) ಬಂಧಿತರು.

ಏಳು ಮಂದಿ ಆರೋಪಿಗಳ ವಿರುದ್ಧ ಆಂಧ್ರಪ್ರದೇಶ, ಬೆಂಗಳೂರು ನಗರ, ಗ್ರಾಮಾಂತರದ ವಿವಿಧ ಠಾಣೆಯಲ್ಲಿ ಕೊಲೆ, ಕೊಲೆ ಯತ್ನ, ಎನ್‌ಡಿಪಿಎಸ್‌ ಹಾಗೂ ದರೋಡೆ ಸೇರಿ ಹಲವು ಅಪರಾಧ ಪ್ರಕರಣಗಳ ಅಡಿಯಲ್ಲಿ ಪ್ರಕರಣಗಳು ದಾಖಲಾಗಿವೆ. ಪ್ರತ್ಯೇಕ ಪ್ರಕರಣಗಳಲ್ಲಿ ಆರೋಪಿಗಳು ಜೈಲಿಗೆ ಹೋದಾಗ ಪರಸ್ಪರ ಪರಿಚಯವಾಗಿ, ದೊಡ್ಡ ಮಟ್ಟದಲ್ಲಿ ಮಾದಕ ವಸ್ತು ಮಾರಾಟ ಜಾಲ ವಿಸ್ತರಿಸಿಕೊಂಡಿದ್ದರು ಎಂದು ಪೊಲೀಸರು ಹೇಳಿದರು.

ಆರೋಪಿಗಳ ಪೈಕಿ ಅರವಿಂದ್‌, ಪವನ್‌, ಅಮ್ಜದ್‌ ಜು. 15ರಂದು ದೇವರಚಿಕ್ಕನಹಳ್ಳಿಯ ಆರ್‌ಟಿಒ ಕಚೇರಿಯ ಹುಣ ಸೇಮರದ ಸಮೀಪದಲ್ಲಿ ನಿರ್ಮಾಣ ಹಂತದಲ್ಲಿರುವ ಕಟ್ಟಡದಲ್ಲಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದರು. ಈ ಮಾಹಿತಿ ತಿಳಿದ ಪೊಲೀಸರು ತಂಡ ರಚಿಸಿ ಮಾಲು ಸಮೇತ ಆರೋಪಿಗಳ ಸೆರೆಗೆ ಕಾರ್ಯಾಚರಣೆ ಆರಂಭಿಸಿದ್ದರು. ಅದರಂತೆ ಕ್ಷೀಪ್ರಕಾರ್ಯಾಚರಣೆ ನಡೆಸಿದ ತಂಡ ಮೂವರು ಆರೋಪಿಗಳನ್ನು ಬಂಧಿಸಿ 6 ಕೆ.ಜಿ. 380 ಗ್ರಾಂ ಗಾಂಜಾ ವಶಕ್ಕೆ ಪಡೆಯಲಾಗಿತ್ತು. ಬಳಿಕ ಮೂವರ ವಿಚಾರಣೆಯಲ್ಲಿ ಇತರೆ ಮೂವರು ಆರೋಪಿಗಳ ಬಗ್ಗೆ ಮಾಹಿತಿ ಸಿಕ್ಕಿತ್ತು ಎಂದು ಪೊಲೀಸರು ಹೇಳಿದರು.


Spread the love

About Laxminews 24x7

Check Also

ಆನ್‌ಲೈನ್ ಗೇಮಿಂಗ್ ಪ್ರಚಾರ-ನಿಯಂತ್ರಣ ಕಾಯಿದೆ ಪ್ರಶ್ನಿಸಿ ಹೈಕೋರ್ಟ್​ಗೆ ಅರ್ಜಿ: ಆ.30ಕ್ಕೆ ವಿಚಾರಣೆ

Spread the love ಬೆಂಗಳೂರು: ಹಣವನ್ನು ಪಣಕ್ಕಿಟ್ಟು ಆಡುವಂತಹ ಆನ್‌ಲೈನ್​ ಗೇಮ್​ಗಳಿಗೆ ನಿಷೇಧ ಹೇರುವುದಕ್ಕೆ ಅವಕಾಶ ಕಲ್ಪಿಸುವ ಆನ್‌ಲೈನ್ ಗೇಮಿಂಗ್ ಪ್ರಚಾರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ