ಬೆಳಗಾವಿ ನಗರದಲ್ಲಿ ಬೆಳಗಾವಿ ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಕಾಂಗ್ರೆಸ್ ಪಕ್ಷದ ಚಿಂತನಾ ಶಿಬಿರ ಸಮಾವೇಶವನ್ನು ಹಮ್ಮಿಕೊಳ್ಳಲಾಗಿತ್ತು.
ಬೆಳಗಾವಿಯ ಹಳೆ ಪಿಬಿ ರಸ್ತೆಯ ಸಾಯಿ ಭವನದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸತೀಶ್ ಜಾರಕಿಹೊಳಿ ರವರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷ ಸಂಘಟನೆ ಹಾಗೂ ಬಲವರ್ಧನೆಗಾಗಿ ಚಿಂತನಾ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಅನೇಕ ಹಿರಿಯ ಕಾಂಗ್ರೆಸ್ ನಾಯಕರು ಭಾಗಿಯಾಗಿದ್ದರು.
ಈ ವೇಳೆ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಎಂಎಲ್‌ಇ ಚನ್ನರಾಜ್ ಹಟ್ಟಿಹೊಳಿರವರು, ಕಾಂಗ್ರೆಸ್ ನಾಯಕರ ಆತ್ಮಬಲವನ್ನು ಕುಗ್ಗಿಸಬೇಕೆಂಬ ಉದ್ದೇಶದಿಂದ ಬಿಜೆಪಿ ಸರಕಾರ ಸೋನಿಯಾ ಗಾಂಧಿ ರವರ ಮೇಲೆ ವಿಚಾರಣೆ ಎಂಬ ನಾಟಕ ಮಾಡುತ್ತಿದೆ. ಕೇಂದ್ರ ಹಾಗೂ ರಾಜ್ಯ ಸರಕಾರದ ವಿರುದ್ಧ ನಾವೆಲ್ಲ ಧ್ವನಿ ಎತ್ತಬೇಕಿದೆ. ನಾವೆಲ್ಲ ಸೇರಿ ಇನ್ನೂ ದೊಡ್ಡ ಮಟ್ಟದಲ್ಲಿ ಪಕ್ಷವನ್ನು ಕಟ್ಟೋಣ. ಈ ಕುರಿತಂತೆ ನಿಮ್ಮ ಭಾವನೆಯನ್ನು ವ್ಯಕ್ತಪಡಿಸಿ. ಅವುಗಳನ್ನೆಲ್ಲ ನಾವು ಪಡೆದುಕೊಂಡು ಕಾರ್ಯೋನ್ಮುಖವಾಗೋಣ ಎಂದರು.