ನವದೆಹಲಿ: ರಾಷ್ಟ್ರಪತಿಯಾಗಿ ಆಯ್ಕೆಯಾಗಿರುವ ದ್ರೌಪದಿ ಮುರ್ಮು ಅವರು ನಾಳೆ (ಜುಲೈ 25 )ದೇಶದ ಅತ್ಯುನ್ನತ ಸಾಂವಿಧಾನಿಕ ಹುದ್ದೆಯ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಸಂಸತ್ತಿನ ಸೆಂಟ್ರಲ್ ಹಾಲ್‌ನಲ್ಲಿ ಸೋಮವಾರ ಬೆಳಗ್ಗೆ 10.15ಕ್ಕೆ ಸಮಾರಂಭ ನಡೆಯಲಿದ್ದು, ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ ಅವರಿಗೆ ರಾಷ್ಟ್ರಪತಿಗಳ ಪ್ರಮಾಣ ವಚನ ಬೋಧಿಸಲಿದ್ದಾರೆ ಎಂದು ಕೇಂದ್ರ ಗೃಹ ಸಚಿವಾಲಯ ತಿಳಿಸಿದೆ.
21 ಗನ್ ಸೆಲ್ಯೂಟ್ ನಂತರ ಪ್ರಮಾಣ ವಚನ ಸ್ವೀಕರಿಸಿ, ರಾಷ್ಟ್ರಪತಿ ಭಾಷಣ ಮಾಡಲಿದ್ದಾರೆ. ಸಮಾರಂಭದ ಮೊದಲು, ನಿರ್ಗಮಿಸುವ ರಾಷ್ಟ್ರಪತಿ ರಾಮ್ ನಾಥ್ ಕೊವಿಂದ್ ಮತ್ತು ರಾಷ್ಟ್ರಪತಿಯಾಗಿ ಆಯ್ಕೆಯಾದ ದ್ರೌಪದಿ ಮುರ್ಮು ಅವರು ವಿಧ್ಯುಕ್ತ ಮೆರವಣಿಗೆಯಲ್ಲಿ ಸಂಸತ್ತಿಗೆ ಆಗಮಿಸುತ್ತಾರೆ.
ಉಪರಾಷ್ಟ್ರಪತಿ ಮತ್ತು ರಾಜ್ಯಸಭೆಯ ಅಧ್ಯಕ್ಷ ಎಂ. ವೆಂಕಯ್ಯ ನಾಯ್ಡು, ಪ್ರಧಾನಿ ನರೇಂದ್ರ ಮೋದಿ, ಲೋಕಸಭೆ ಸ್ಪೀಕರ್ ಓಂ ಬಿರ್ಲಾ, ಮಂತ್ರಿ ಮಂಡಳದ ಸದಸ್ಯರು, ರಾಜ್ಯಪಾಲರು, ಮುಖ್ಯಮಂತ್ರಿಗಳು, ರಾಜತಾಂತ್ರಿಕ ನಿಯೋಗಗಳ ಮುಖ್ಯಸ್ಥರು, ಸಂಸತ್ತಿನ ಸದಸ್ಯರು ಮತ್ತು ಪ್ರಮುಖ ನಾಗರಿಕ ಮತ್ತು ಮಿಲಿಟರಿ, ಸರಕಾದ ಅಧಿಕಾರಿಗಳು ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.