ಬೆಂಗಳೂರು: ಕಾಂಗ್ರೆಸ್ ನಲ್ಲಿ ಆರಂಭವಾಗಿದ್ದ ದಲಿತ ಮುಖ್ಯಮಂತ್ರಿ ವಿಚಾರ ಇದೀಗ ಬಿಜೆಪಿ ಪಾಳಯದಲ್ಲಿಯೂ ಆರಂಭವಾಗಿದ್ದು, ರಾಜ್ಯದಲ್ಲಿ ದಲಿತ ಸಿಎಂ ಆಗುವುದು ಬಿಜೆಪಿಯಲ್ಲಿ ಮಾತ್ರ ಎಂದು ಪರಿಷತ್ ಸದಸ್ಯ ಚೆಲವಾದಿ ನಾರಾಯಣಸ್ವಾಮಿ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರಲ್ಲಿ ಯಾವುದೇ ಒಗ್ಗಟ್ಟಿಲ್ಲ, ಸ್ಥಾನಮಾನಕ್ಕಾಗಿ ಕಿತ್ತಾಡಿಕೊಳ್ಳುತ್ತಿದ್ದಾರೆ. ಕಾಂಗ್ರೆಸ್ ನವರು ದಲಿತರನ್ನು ವೋಟ್ ಬ್ಯಾಂಕ್ ಮಾಡಿಕೊಂಡಿದ್ದಾರೆ. ದಲಿತ ಸಿಎಂ ಎಂಬುದು ಆ ಪಕ್ಷದಲ್ಲಿ ಕೇವಲ ಹೇಳಿಕೆಗಷ್ಟೇ ಸೀಮಿತ ಎಂದರು.
ರಾಜ್ಯದಲ್ಲಿ ದಲಿತ ಮುಖ್ಯಮಂತ್ರಿಯಾಗುವುದು ಬಿಜೆಪಿಯಲ್ಲಿ ಮಾತ್ರ. ಹಿರಿಯನಾಕರು, ಸಚಿವರಾಗಿರುವ ಗೋವಿಂದ ಕಾರಜೋಳ ಅವರನ್ನು ಸಿಎಂ ಮಾಡುತ್ತೇವೆ. ಸಾಧ್ಯವಾದರೆ ಅವರನ್ನೇ ಮುಖ್ಯಮಂತ್ರಿಯನ್ನಾಗಿ ಮಾಡಲಾಗುವುದು ಎಂದು ಹೇಳುವ ಮೂಲಕ ಕಾಂಗ್ರೆಸ್ ನಾಯಕರಿಗೆ ಕೌಂಟರ್ ಕೊಟ್ಟಿದ್ದಾರೆ.
Laxmi News 24×7