Breaking News

ಸಿಎಂ ಆಗಲು ಬ್ಯಾಕ್ ಗ್ರೌಂಡ್ ಚೆನ್ನಾಗಿರಬೇಕು: ಡಿಕೆಶಿಗೆ HDK ಟಾಂಗ್

Spread the love

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ವಿರುದ್ಧ ಮಾಜಿ‌ ಸಿಎಂ ಹೆಚ್.ಡಿ.ಕುಮಾರಸ್ವಾಮಿ ರಾಮನಗರದಲ್ಲಿ  ವಾಗ್ದಾಳಿ ನಡೆಸಿದರು. ‌ಸಿಎಂ ವಿಚಾರವಾಗಿ ಕಿತ್ತಾಟ ಹಿನ್ನೆಲೆ ವಾಗ್ದಾಳಿ ನಡೆಸಿ ರಾಮನಗರದಲ್ಲಿ ಯಾರೇ ಬಂದರೂ ನಮ್ಮನ್ನ ಏನು‌ ಮಾಡಲು ಸಾಧ್ಯವಿಲ್ಲ. ಕಳೆದ ಮೈತ್ರಿ ಸರ್ಕಾರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಇರಲಿಲ್ಲ ಅಷ್ಟೇ.‌

ಉಳಿದ ಎಲ್ಲಾ ಚುನಾವಣೆಯಲ್ಲಿರಾಮನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ (ಇದ್ದರು. ಜನತೆಯ ಆರ್ಶೀವಾದ ಇರುವವರೆಗೆ ಏನು ಆಗಲ್ಲ. ರಾಮನಗರದಲ್ಲಿ (ಶಿವಕುಮಾರ್ ಅವಕಾಶ ಕೇಳಿರುವುದು ತಪ್ಪಿಲ್ಲ. ಆದರೆ ಜನರ ಕಷ್ಟಸುಖಕ್ಕೆ ಕೆಲಸ ಮಾಡಿದ್ದೇನೆ ಮತ ಕೊಡಿ ಎಂದು ಕೇಳಬಹುದು. ಕೇವಲ ಅಧಿಕಾರಕ್ಕೆ ಮಾತ್ರ ಕೇಳಿದರೆ ಆಗಲ್ಲ ಎಂದು ವಾಗ್ದಾಳಿ ನಡೆಸಿದರು.

ಅವರ ಹಿಂದಿನ ಬ್ಯಾಕ್ ಗ್ರೌಂಡ್ ಗಳನ್ನ ನೋಡ್ತಾರೆ, ಯಾವ ತರಹದ ಬ್ಯಾಕ್ ಗ್ರೌಂಡ್ ಬೇಕು ಹೇಳಿ. ಎಲ್ಲಾ ತರಹ ಇದೆ. ಕನ್ನಡಿಯಲ್ಲಿ ತೋರಿಸಿದ್ದಾರೆ. ಕಳೆದ 25 ವರ್ಷದಲ್ಲಿ‌ ಕುಮಾರಸ್ವಾಮಿ ಸೋತಿದ್ದ ಎಂದಿದ್ದಾರೆ. ಅವರು ದೇವೇಗೌಡರ ವಿರುದ್ಧ ಸೋತಿದ್ದಾರೆ.‌ ನಾನು ರಾಜಕೀಯವಾಗಿ ಅಂಬೆಗಾಲು ಇಡುವಾಗ ಸೋತಿದ್ದೆ.

ಅವರು ಗೆದ್ದಿದ್ದು ಇತಿಹಾಸ ಇದೆ. ಒಂದು ಕಥೆ ಬರೆಯಬಹುದು ಅವರು ಒಕ್ಕಲಿಗ ಟ್ರಂಪ್ ಕಾರ್ಡ್ ಬಳಸಿದರೆ ಜನ‌ತೀರ್ಮಾನ ಮಾಡ್ತಾರೆ. ಇಲ್ಲಿ ಸಿಎಂ ಆಗುವುದು ಮುಖ್ಯವಲ್ಲ, ಅವರ ನಡವಳಿಕೆ, ನಾಡಿನ ಸಮಸ್ಯೆ ಬಗ್ಗೆ ಅರಿವಿರಬೇಕು ಎಂದರು.‌


Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ