Home / ನವದೆಹಲಿ / ಭಾರತದ 15ನೇ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು ಪ್ರಮಾಣವಚನ ಸ್ವೀಕಾರ

ಭಾರತದ 15ನೇ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು ಪ್ರಮಾಣವಚನ ಸ್ವೀಕಾರ

Spread the love

ನವದೆಹಲಿ: ಭಾರತದ 15ನೇ ರಾಷ್ಟ್ರಪತಿಯಾಗಿ ಬುಡಕಟ್ಟು ಸಮುದಾಯದ ನಾಯಕಿ ದ್ರೌಪದಿ ಮುರ್ಮು ಅವರು ಸೋಮವಾರ (ಜುಲೈ 25) ಪ್ರಮಾಣವಚನ ಸ್ವೀಕರಿಸಿದರು.

 

ಸಂಸತ್ ಭವನದ ಸೆಂಟ್ರಲ್ ಹಾಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್ .ವಿ.ರಮಣ ಅವರು ಮುರ್ಮು ಅವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಈ ಸಂದರ್ಭದಲ್ಲಿ ನಿರ್ಗಮಿತ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು, ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ಅಧ್ಯಕ್ಷೆ ಸೋನಿಯ ಗಾಂಧಿ ಹಾಜರಿದ್ದರು.

21 ಗನ್ ಸೆಲ್ಯೂಟ್ ಗಳ ಬಳಿಕ ದ್ರೌಪದಿ ಮುರ್ಮು ಅವರು ದೇಶದ ಅತ್ಯುನ್ನತ ಸಾಂವಿಧಾನಿಕ ಹುದ್ದೆಯನ್ನು ಪ್ರತಿಜ್ಞಾವಿಧಿ ಸ್ವೀಕರಿಸುವ ಮೂಲಕ ಅಲಂಕರಿಸಿದ್ದಾರೆ. ಇದೇ ವೇಳೆ ಮುರ್ಮು ಅವರು 1977ರ ಬಳಿಕ ಜುಲೈ 25ರಂದು ಪ್ರಮಾಣವಚನ ಸ್ವೀಕರಿಸಿದ ಸತತ 10ನೇ ರಾಷ್ಟ್ರಪತಿ ಎಂಬ ಖ್ಯಾತಿಗೆ ಪಾತ್ರರಾಗಿದ್ದಾರೆ. ನೀಲಂ ಸಂಜೀವ ರೆಡ್ಡಿ ಬಳಿಕ ಕೋವಿಂದ್ ವರೆಗೆ ಎಲ್ಲರೂ ಜುಲೈ 25ರಂದೇ ಪ್ರಮಾಣ ವಚನ ಸ್ವೀಕರಿಸಿದ್ದರು.


Spread the love

About Laxminews 24x7

Check Also

‘ಅಂಬರೀಶ್ ಆಶೀರ್ವಾದದಿಂದ ಮಗನ ಸಿನಿಮಾ ಬಿಡುಗಡೆ’: ಅಂಬಿ ಸಮಾಧಿಗೆ ಪೂಜೆ ಸಲ್ಲಿಸಿದ ಸುಮಲತಾ

Spread the love ಮಂಡ್ಯ: ಇಂದು ಕನ್ನಡಿಗರ ಮೆಚ್ಚಿನ ನಟ ಅಂಬರೀಶ್ ಅವರ 5ನೇ ವರ್ಷದ ಪುಣ್ಯಸ್ಮರಣೆ ಹಿನ್ನೆಲೆ, ಮಂಡ್ಯದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ